ನ್ಯೂಸ್

ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಪಜ್ಞಾನಿಗಳು‌, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ; ಹರಿಪ್ರಸಾದ್​ ಹೇಳಿಕೆಗೆ ರಾಜ್ಯ ಬಿಜೆಪಿ ಟಾಂಗ್​

Webdesk - Manjunatha B

ಬೆಂಗಳೂರು: RSS ಸಹ ಸಂಸ್ಥಾಪಕರಾದ ಕೇಶವ್​ ಬಲಿರಾಮ್​ ಹೆಡ್​ಗೇವಾರ್​ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್​ ಹೇಳಿಕೆಗೆ ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿ​ ತಿರುಗೇಟು ನೀಡಿದೆ.

ಈ ಕುರಿತು ಟ್ವೀಟ್​ ಮಾಡಿರುವ ರಾಜ್ಯ ಬಿಜೆಪಿ ಘಟಕ ರಾಜ್ಯದಲ್ಲಿ ಕಾಂಗ್ರೆಸ್​ ಬರುತ್ತಿದ್ದಂತೆ ಅಲ್ಪಜ್ಞಾನಿಗಳು‌, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ ಎಂದು ಹರಿಹಾಯ್ದಿದೆ.

ಯೋಗ್ಯತೆ ಇಲ್ಲ

ರಾಜ್ಯದಲ್ಲಿ‌ ಕಾಂಗ್ರೆಸ್​ ಬರುತ್ತಿದ್ದಂತೆ ಅಲ್ಪಜ್ಞಾನಿಗಳು‌, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ. ಅಂದ ಹಾಗೆ, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಮಾಡಿದ ಒಂದೇ ಒಂದು ಒಳ್ಳೆ ಕೆಲಸ ಅಂದರೆ , ಮಾನಸಿಕ ಅಸ್ವಸ್ಥರಾಗಿರುವ ಬಿ.ಕೆ. ಹರಿಪ್ರಸಾದ್​ ಅವರನ್ನು ಸಚಿವ ಸಂಪುಟದಿಂದ ದೂರವಿಟ್ಟಿದ್ದು ಎಂದು ಲೇವಡಿಯಾಡಿದೆ.

ಗೌರವಾನ್ವಿತ ಹೆಡ್​ಗೇವಾರ್​ರಂತಹ ಅಪ್ರತಿಮ ದೇಶಭಕ್ತರ ಹೆಸರು ಹೇಳುವ ಯೋಗ್ಯತೆಯನ್ನು ಹರಿಪ್ರಸಾದರವರು ಮೊದಲು ಸಂಪಾದಿಸಲಿ, ಉಳಿದದ್ದೆಲ್ಲ ಮತ್ತೆ ಎಂದು ಟ್ವೀಟ್​ ಮಾಡಿ ಹೇಳಿಕೆಗೆ ತಿರುಗೇಟು ನೀಡಿದೆ.

ಬಿಜೆಪಿಯವರು ನಿರೂಪಿಸಲಿ

ಗುರುವಾರ ಶಿವಮೊಗ್ಗದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಮಾತನಾಡಿದ ಬಿ.ಕೆ. ಹರಿಪ್ರಸಾದ್​ ಕೇಶವ್​ ಬಲಿರಾಮ್​ ಹೆಡ್​ಗೇವಾರ್​ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂದು ಹೇಳುವ ಮೂಲಕ ಬಿಜೆಪಿಯವರ ಕೆಂಗಣ್ಣಿಗೆ ಗುರಿಯಾಗಿದ್ದರು.

ಶಿಕ್ಷಣ ಸೇರಿದಂತೆ ಯಾವ ಇಲಾಖೆಯಲ್ಲೂ ಸಂಘ ಪರಿವಾರದ ಸಿದ್ಧಾಂತಗಳನ್ನು ಇರಲು ಬಿಡುವುದಿಲ್ಲ. ಹೆಡಗೇವಾರ್​ ತರಹದ ರಣಹೇಡಿಗಳ ವಿಚಾರಗಳು ಇನ್ನು ಮುಂದೆ ಪಠ್ಯದಲ್ಲಿ ಇರುವುದಿಲ್ಲ. ಹೆಡಗೇವಾರ್​ ಒಬ್ಬ ಸ್ವಾತಂತ್ರ್ಯ ಹೋರಾಟಗಾರ ಎಂಬುದನ್ನು ಬಿಜೆಪಿಯವರು ನಿರೂಪಿಸಲಿ. ಬ್ರಿ

ಟಿಷರ ಬಳಿ ಕ್ಷಮಾಪಣೆ ಕೇಳಿದವರಿಗೆಲ್ಲಾ ಸ್ವಾತಂತ್ರ್ಯ ಹೋರಾಟಗಾರರು ಎಂದು ಮನ್ನಣೆ ನೀಡಲು ಸಾಧ್ಯವಿಲ್ಲ. ಅವರೆಲ್ಲ ಬ್ರಿಟಿಷರ ಬಳಿ ಕ್ಷಮಾಪಣಾ ಪತ್ರ ನೀಡಿದ್ದು ಏಕೆ ಎಂದು ಬಿಜೆಪಿಯರು ನಿರೂಪಿಸಲಿ ಎಂದು ಸವಾಲೆಸೆದಿದ್ದರು.