ನ್ಯೂಸ್

ಬರ ಪರಿಹಾರ ಕೇಳಲು ಐಷಾರಾಮಿ ವಿಮಾನದಲ್ಲಿ ಪ್ರಯಾಣ; ಮಜವಾದಿ ಸಿದ್ದರಾಮಯ್ಯ ಆಡಂಬರಕ್ಕೇನು ಕಡಿಮೆ ಇಲ್ಲ ಎಂದ ಬಿಜೆಪಿ

ಬೆಂಗಳೂರು: ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ.

ಇತ್ತೀಚಿಗೆ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣಿಸಿದ್ದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿರುವ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ ಎಂದು ಕಿಡಿಕಾರಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಬಿಜೆಪಿ ರಾಜ್ಯದಲ್ಲಿ ತೀವ್ರ ಬರ ಬಂದು ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ. ಆದರೆ, ಮಜವಾದಿ ಸಿದ್ದರಾಮಯ್ಯ ಹಾಗೂ ಅವರ ಅತ್ಯಾಪ್ತ ಜಮೀರ್​ ಆಡಂಬರಕ್ಕೇನು ಕಡಿಮೆ ಇಲ್ಲ.

ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ವಿಪಕ್ಷ ಬಿಜೆಪಿ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ವಾಗ್ದಾಳಿ ನಡೆಸಿದೆ.