ನ್ಯೂಸ್

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​ ಕಟೀಲ್​ಗೆ ಕರೊನಾ ಸೋಂಕು

ಬೆಂಗಳೂರು: ಬಿಜೆಪಿ ರಾಜ್ಯಾದ್ಯಕ್ಷ, ಹಾಗೂ ದಕ್ಷಿಣ ಕನ್ನಡ ಸಂಸದ ನಳೀನ್​ಕುಮಾರ್​ ಕಟೀಲ್​ ಕರೊನಾ ಸೋಂಕಿಗೆ ಒಳಗಾಗಿದ್ದಾರೆ.

ನಾನು ಕೋವಿಡ್​19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ನಳೀನ್​ಕುಮಾರ್​ ಟ್ವೀಟ್​ ಮಾಡಿದ್ದಾರೆ.

ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರೈಸಿದ ಸಂಭ್ರಮದ ಬೆನ್ನಲ್ಲೇ, ಕರೊನಾ ಸೋಂಕು ಕಾಣಿಸಿಕೊಂಡಿದೆ.