ನವದೆಹಲಿ: ಟ್ರೈನಿ ವೈದ್ಯೆ ಹತ್ಯೆ ಖಂಡಿಸಿ ಕೋಲ್ಕತ್ತಾದಲ್ಲಿ ಧರಣಿ ನಡೆಸುತ್ತಿರುವ ಸ್ವಸ್ಥ ಭವನಕ್ಕೆ ತೆರಳಿದ ಮಮತಾ ಬ್ಯಾನರ್ಜಿ ತಮ್ಮ 9 ನಿಮಿಷದ ಭಾಷಣದಲ್ಲಿ 76 ಬಾರಿ ತಮ್ಮ ವ್ಯಕ್ತಿತ್ವದ ಬಗ್ಗೆಯೇ ಪ್ರಸ್ತಾಪಿಸಿಕೊಂಡಿದ್ದಾರೆ ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ವ್ಯಂಗ್ಯವಾಡಿದ್ದಾರೆ.
ವೈದ್ಯರ ಪ್ರತಿಭಟನಾ ಸ್ಥಳದಲ್ಲಿ ಮಮತಾ ಬ್ಯಾನರ್ಜಿ ಮಾತನಾಡಿರುವ 9 ನಿಮಿಷದ ವೀಡಿಯೊವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಹಾಗೂ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ವೈದ್ಯರು ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ತೆರಳಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮಾತನಾಡುವಾಗ ನಾನು, ನಾಡಿ, ನೆನೆ ಎಂಬ ಪದವನ್ನು 76 ಬಾರಿ ಬಳಸಿದ್ದಾರೆ ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ.
ಎಕ್ಸ್(X) ನಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಮಮತಾ ಬ್ಯಾನರ್ಜಿಯವರ 9 ನಿಮಿಷಗಳ ಭಾಷಣವಿದೆ. ಅವರ ಬಗ್ಗೆ ಸ್ವಲ್ಪ ಜಾಸ್ತಿಯೇ ಹೇಳಿಕೊಂಡಿದ್ದಾರೆ. ಮಮತಾ ಬ್ಯಾನರ್ಜಿ ಅವರ ವ್ಯಕ್ತಿತ್ವಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಆಕೆ ಯಾರ ಮಾತನ್ನೂ ಕೇಳಲಿಲ್ಲ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ತುಂಬಾ ಕಷ್ಟ ಎಂದು ಸುವೇಂದು ಅಧಿಕಾರಿ ತಿಳಿಸಿದ್ದಾರೆ.