ನ್ಯೂಸ್

ವಿಪಕ್ಷ ನಾಯಕನ ಆಯ್ಕೆಗೆ ಶಾಸಕರ ಅಭಿಪ್ರಾಯ ಸಂಗ್ರಹಿಸಿದ ರಾಜ್ಯ ಬಿಜೆಪಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಆ್ಯಕ್ಟಿವ್​ ಆಗಿರುವ ರಾಜ್ಯ ಬಿಜೆಪಿ ನಾಯಕರು ಶಾಸಕರು, ಪರಾಜಿತ ಅಭ್ಯರ್ತಿಗಳ ಜೊತೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

ಪ್ರತಿಪಕ್ಷ ನಾಯಕನ ವಿಚಾರದಲ್ಲಿ ಬಿಜೆಪಿ ನಾಯಕರು ಪ್ರತಿಯೊಬ್ಬ ಶಾಸಕರ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದು, ಬಳಿಕ ವರದಿಯನ್ನು ಪಕ್ಷದ ವರಿಷ್ಠರಿಗೆ ಸಲ್ಲಿಸಲು ಗುರುವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಆಯೋಜಿಸಿದ್ದ ಈ ಸಭೆಯ ನಿರ್ಧಾರದಂತೆ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಶಾಸಕರ ಅಭಿಪ್ರಯಾವನ್ನು ಸಂಗ್ರಹಿಸಿದ್ದು, ವರಿಷ್ಠರಿಗೆ ವರದಿ ಸಲ್ಲಿಸಲಿದ್ದಾರೆ‌.

ದ್ವಂದ್ವ ನೀತಿ ಸರಿಯಲ್ಲ

ಸಭೆ ಬಳಿಕ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಇದೇ ಮೊದಲ ಬಾರಿಗೆ ಆಯ್ಕೆಯಾಗಿರುವ ಪಕ್ಷದ 22 ಶಾಸಕರಿಗೆ ಅಭಿನಂದನೆ ಸಲ್ಲಿಸಲಾಯಿತು. ಕೇಂದ್ರ ಸರ್ಕಾರದ ಒಂಬತ್ತು ವರ್ಷಗಳ ಯೋಜನೆಗಳು, ಸಾಧನೆಗಳನ್ನು ಜನ ಮನೆಗೆ ಬಾಗಿಲಿಗೆ ತೆರಳಿ ತಿಳಿಸಲು ನಿರ್ಧರಿಸಲಾಗಿದೆ.

ಗ್ಯಾರಂಟಿಗಳ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರದ ದ್ವಂದ್ವ, ಚುನಾವಣೆಗೆ ಮುಂಚೆ ಒಂದು ಮಾತು, ಅಧಿಕಾರಕ್ಕೆ ಬಂದ ನಂತರ ಮತ್ತೊಂದು ಮಾತನಾಡುವ ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸಲು ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ತಿಳಿಸಿದ್ಧಾರೆ.