ನ್ಯೂಸ್

ಶ್ರೀರಾಮುಲು ಕೇಂದ್ರದ ಮಂತ್ರಿ ಮಾಡದಿದ್ದರೆ ಬಿಜೆಪಿ ಬೈಕಾಟ್|made a central minister

ಬೆಂಗಳೂರು: ವಾಲ್ಮಿಕಿ ಸಮುದಾಯದ ನಾಯಕ ಶ್ರೀರಾಮುಲು ಅವರಿಗೆ ಬಿಜೆಪಿಯು ರಾಜ್ಯಸಭಾ ಸದಸ್ಯತ್ವ ನೀಡಿ, ಕೇಂದ್ರ ಮಂತ್ರಿ ಮಾಡದೇ ಹೋದಲ್ಲಿ ವಾಲ್ಮಿಕಿ ಸಮಯದಾಯವು ಬಿಜೆಪಿಯನ್ನು ಮುಂದಿನ ಎಲ್ಲ ಚುನಾವಣೆಗಳಲ್ಲೂ ಬೈಕಾಟ್ ಮಾಡಬೇಕಾಗುತ್ತದೆ(BJP will boycott if Sriramulu is not made a central minister) ಎಂದು ವಾಲ್ಮೀಕಿ ಸ್ವಾಭಿಮಾನಿ ಸಂಘದ ರಾಜ್ಯಾಧ್ಯಕ್ಷ ಚಳುವಳಿ ರಾಜಣ್ಣ(Rajanna) ಎಚ್ಚರಿಕೆ ನೀಡಿದರು.

ವಾಲ್ಮಿಕಿ ಸ್ವಾಭಿಮಾನಿ ಸಂಘ, ಜೈಭೀಮ್ ಅಖಿಲ ಭಾರತ ದಲಿತ ಹೋರಾಟ ಸಮಿತಿ, ಶ್ರೀರಾಮುಲು ಅಭಿಮಾನಿ ಬಳಗ ಸೇರಿದಂತೆ ಹಲವು ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಬಿಜೆಪಿ ಒಂದು ವಾರದೊಳಗೆ ಜನಾರ್ಧನ ರೆಡ್ಡಿಯನ್ನು ಉಚ್ಛಾಟನೆ ಮಾಡದೇ ಹೋದಲ್ಲಿ ಉಗ್ರಹೋರಾಟದ ಬಿಸಿ ಮುಟ್ಟಿಸಲಿದ್ದೇವೆ ಎಂದರು.

ಬಿಜೆಪಿಯು ಶ್ರೀರಾಮುಲುಗೆ ಮಾಡಿದ ಅನ್ಯಾಯಕ್ಕೆ ಪರಿಹಾರವಾಗಿ ಅವರನ್ನು ಕೇಂದ್ರದ ಮಂತ್ರಿ ಮಾಡಲಿ, ಬಿಜೆಪಿಯ ಇತಿಹಾಸದಲ್ಲೇ ವಾಲ್ಮಿಕಿ ಸಮುದಾಯದ ನಾಯಕರೊಬ್ಬರನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡಿದ ಉದಾಹರಣೆ ಇಲ್ಲ. ಈಗಲಾದರೂ ನಮ್ಮ ಸಮುದಾಯಕ್ಕೆ ನ್ಯಾಯ ಕೊಡಲಿ ಎಂದು ಹೇಳಿದರು.

ಸಂಡೂರು ಉಪಚುನಾವಣೆ ಸೋಲಿನ ಹೊಣೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಜನಾರ್ಧನ ರೆಡ್ಡಿ ಹೊರಬೇಕಿತ್ತು. ತಮ್ಮ ತಪ್ಪನ್ನ ಮರೆಮಾಚಲು ಶ್ರೀರಾಮುಲು ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರೆಡ್ಡಿ ಮಾತು ಕೇಳಿ ರಾಮುಲುಗೆ ಅವಮಾನ

ಜೈಭೀಮ್ ಅಖಿಲ ಭಾರತ ದಲಿತ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎಂ.ಎಂ.ರಾಜು ಮಾತನಾಡಿ, ರಾಜ್ಯದ ಸಂಪತ್ತು ಲೂಟಿ ಹೊಡೆದು ಜೈಲಿಗೆ ಹೋದ ವ್ಯಕ್ತಿ ಜನಾರ್ಧನ ರೆಡ್ಡಿ ಮಾತನ್ನು ಕೇಳಿ ಕೆಲ ನಾಯಕರು ಪಕ್ಷದ ಕಟ್ಟಾಳು ರಾಮುಲುಗೆ ಅವಮಾನ ಮಾಡುತ್ತಿರುವುದು ಸರಿಯಲ್ಲ, ಈ ಕೂಡಲೇ ಶ್ರೀರಾಮುಲು ಅವರ ಬಳಿ ಜನಾರ್ಧನ ರೆಡ್ಡಿ ಹಾಗೂ ಬಿಜೆಪಿ ನಾಯಕರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ವಾಲ್ಮೀಕಿ ಸಮುದಾಯ ಸುಮ್ಮನಿರುವುದಿಲ್ಲ

ವಾಲ್ಮಿಕಿ ಯುವಬ್ರಿಗೇಡ್ ಸದಸ್ಯ ಶಿವನಾಯಕ ಮಾತನಾಡಿ, ಬಿಜೆಪಿ ಶ್ರೀರಾಮುಲು ಅವರಿಗೆ ಮಾಡುತ್ತಿರುವ ಅನ್ಯಾಯ ನೋಡಿ ಸುಮ್ಮನಿರಲು ಸಾಧ್ಯವಿಲ್ಲ. ಈಗಾಗಲೇ ಜನಾರ್ಧನ ರೆಡ್ಡಿಯಿಂದ ಬಿಜೆಪಿಯಲ್ಲೇ ಒಳಬಣಗಳು ಸೃಷ್ಟಿಯಾಗುತ್ತಿದ್ದು, ಇವರ ಮಾತನ್ನು ಹೀಗೇ ಕೇಳುತ್ತ ಹೋದರೆ, ಬಿಜೆಪಿಯ ಕಟ್ಟಾಳುಗಳು ಪಕ್ಷವನ್ನು ತೊರೆಯಬೇಕಾದ ಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸಿದರು.

ಶ್ರೀರಾಮು ಅಭಿಮಾನಿ ಬಳಕದ ಮುಖಂಡರಾದ ನವೀನ್ ಮದಕರಿ ಪ್ರದೀಪ್ ಮನಮೊಹನ್, ಆರ್‌ಪಿಐ ಅಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾದ ಮುನಿಸ್ವಾಮಿ, ಪ್ರಗತಿಪರ ಮುಖಂಡರಾದ ಫ್ರೊ. ಹರಿರಾಮ್ ಹಾಗೂ ಬಿಜೆಪಿಯು ಪ್ರಮುಖ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಉಪಸ್ಥಿತರಿದ್ದರು.