ನ್ಯೂಸ್

ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್​

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಪ್ರಮುಖ ಆರೋಪಿಯನ್ನು ಬಂಧಿಸಿದೆ.

ಆರೋಪಿಯನ್ನು ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್​ ಬಳಿ ಬಂಧಿಸಿದ್ದು, ಬಂಧಿತನನ್ನು ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ಕರೆದೊಯ್ದಿದ್ದಾರೆ.

ಪ್ರಕರಣದ ಹಿನ್ನೆಲೆ?

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು. ಪ್ರಕರಣದ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವಹಿಸಿತ್ತು.