ನ್ಯೂಸ್

ಅಶ್ಲೀಲ ವಿಡಿಯೋ ಹರಿಬಿಟ್ಟು ಬೆದರಿಕೆ: ಬಿಜೆಪಿ ಯುವ ಮೋರ್ಚಾ ಸದಸ್ಯರಿಂದ ದೂರು

Webdesk - Ashwini HR


ತೀರ್ಥಹಳ್ಳಿ: ತೀರ್ಥಹಳ್ಳಿ ವಾಸಿಯಾದ ಸುಫೈದ್ ಅಲಿ ಎಂಬಾತ ಯುವತಿಯ ಜೊತೆಯಲ್ಲಿರುವ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ ವಾಟ್ಸಾಪ್ ಮತ್ತು ಇತರೆ ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟು, ಬೆದರಿಕೆ ಹಾಕುತ್ತಿರುವ ಸುದ್ದಿ ನಿನ್ನೆಯಿಂದ ಹರಿದಾಡುತ್ತಿದೆ.

ಈ ಸಂಬಂಧ ಸೂಕ್ತ ಕ್ರಮ ತೆಗೆದುಕೊಂಡು ಸುಫೈದ್ ಅಲಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಬಿಜೆಪಿ ಯುವ ಮೋರ್ಚಾ ಆಗ್ರಹಿಸಿದೆ.
ಸುಫೈದ್ ಅಲಿ ಮಹಿಳೆಯರಿಗೆ ಬೆದರಿಕೆಯೊಡ್ಡಿ, ಮಾನಹಾನಿ ಮಾಡುತ್ತಿರುವುದಲ್ಲದೆ, ಕೋಮು ಸಾಮರಸ್ಯಕ್ಕೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿಯ ಯುವ ಮುಖಂಡರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಮನವಿ ಮೂಲಕ ದೂರು ನೀಡಿದ್ದಾರೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕಾಸರವಳ್ಳಿ ಶ್ರೀನಿವಾಸ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕುಕ್ಕೆ ಪ್ರಶಾಂತ್, ಮುಖಂಡರಾದ ಗಣೇಶ್‌ ಪ್ರಸಾದ್‌, ಪ್ರದೀಪ್‌ ಗುರಿ, ಗುರು ಸಿ ಗೌಡ, ಯಶಸ್ವಿ ಕಡ್ತೂರು, ದಯಾನಂದ, ಪ್ರಶಾಂತ್ ಇದ್ದರು.