ನ್ಯೂಸ್

ಮಕ್ಕಳಲ್ಲಿ ದಿಢೀರನೆ ಕಾಣಿಸಿಕೊಂಡ ವಿಚಿತ್ರ ಕಾಯಿಲೆ; ತುಮಕೂರು ಪೋಷಕರಲ್ಲಿ ಆತಂಕ

ತುಮಕೂರು: ಶಾಲಾ ಮಕ್ಕಳ ಕಾಲಲ್ಲಿ ದಿಢೀರನೆ ಕಪ್ಪು ಚುಕ್ಕೆಗಳು ಕಾಣಿಸಿಕೊಂಡಿದ್ದು, ಜಿಲ್ಲೆಯ ತುರುವೇಕೆರೆ ಹಾಗೂ ಕೊರಟಗೆರೆಯ ಗ್ರಾಮದ ಪೋಷಕರಲ್ಲಿ ಆತಂಕ ಉಂಟಾಗಿದೆ.

ಕೊರಟಗೆರೆ ತಾಲೂಕಿನ ಯಲಚೇನಹಳ್ಳಿ ಹಾಗೂ ತುರುವೇಕೆರೆ ತಾಲೂಕಿನ ಕುಣಿಕೇನಹಳ್ಳಿಯ ಮಕ್ಕಳಲ್ಲಿ ಚರ್ಮದ ಫಂಗಸ್ ಕಂಡು ಬಂದಿದ್ದು, ಪಾದಗಳಲ್ಲಿ ಕಪ್ಪು ಚುಕ್ಕೆಗಳಾಗಿವೆ. ಸದ್ಯ ಮಕ್ಕಳಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಳೆದ ಶನಿವಾರದಿಂದ ಕುಣಿಕೇನಹಳ್ಳಿಯ ಗ್ರಾಮದ 21 ಮಕ್ಕಳಲ್ಲಿ ಹಾಗೂ ಯಲಚೇನಹಳ್ಳಿ ಗ್ರಾಮದ 5 ಮಕ್ಕಳಲ್ಲಿ ಕಪ್ಪು ಚುಕ್ಕೆಗಳು ಕಂಡು ಬಂದಿವೆ. ಶಾಲೆಯಿಂದ ಮನೆಗೆ ಮಕ್ಕಳು ವಾಪಸ್ ಬಂದ ಬಳಿಕ ಮಕ್ಕಳ ಅಂಗಾಲು- ಅಂಗೈಲ್ಲಿ ಕಪ್ಪು ಚುಕ್ಕೆಗಳು ಕಾಣಿಸಿಕೊಂಡಿವೆ. ಶಾಲೆಯ ಶಿಕ್ಷಕನಿಗೂ ಇದೆ ಗುಣಲಕ್ಷಣ ಕಾಣಿಸಿಕೊಂಡಿದೆ.

ಮಕ್ಕಳ ಪಾದದಲ್ಲಿ ಕಪ್ಪು ಚುಕ್ಕೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೋಷಕರು ಆತಂಕಗೊಂಡಿದ್ದಾರೆ. ಶಾಲೆಗೆ ಭೇಟಿ ಕೊಟ್ಟ ತುರುವೇಕೆರೆ ಶಾಸಕ ಎಂ.ಟಿ ಕೃಷ್ಣಪ್ಪ ಹಾಗೂ ವೈದ್ಯರ ತಂಡ ಮಕ್ಕಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.