ನ್ಯೂಸ್

23ರಂದು ರಕ್ತದಾನ ಶಿಬಿರ

ಎಂ.ರವಿ

ಗೋಣಿಕೊಪ್ಪಲು: ರಾಜಯೋಗಿನ ದಾದಿ ಪ್ರಕಾಶ ಮಣಿ ಅವರ 18ನೇ ಪುಣ್ಯಸ್ಮರಣೆಯ ಅಂಗವಾಗಿ ಆ.23ಕ್ಕೆ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ಗೋಣಿಕೊಪ್ಪಲು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಂಚಾಲಕಿ ಬಿ.ಕೆ.ರೇಖಾ ತಿಳಿಸಿದ್ದಾರೆ.

ಗೋಣಿಕೊಪ್ಪಲು ಬೈಪಾಸ್ ರಸ್ತೆ ಬ್ರಹ್ಮಾಕುಮಾರೀಸ್ ಸಫಲತಾ ಭವನದಲ್ಲಿ ಅಂದು ಬೆಳಗ್ಗೆ 10.30ರಿಂದ 1.30ರವರೆಗೆ ರಕ್ತದಾನ ಶಿಬಿರ ನಡೆಯಲಿದೆ. ಈ ಶಿಬಿರವನ್ನು ಲೋಪಮುದ್ರಾ ಮೆಡಿಕಲ್ ಸೆಂಟರ್ ಮುಖ್ಯಸ್ಥ ಡಾ.ಅಮೃತ್‌ನಾಣಯ್ಯ ಉದ್ಘಾಟಿಸುವರು. ಹಿರಿಯ ರಾಜಯೋಗ ಶಿಕ್ಷಕಿ ಬಿ.ಕೆ.ಧನಲಕ್ಷ್ಮೀ ಉಪಸ್ಥಿತರಿರುವರು. ವಿಶೇಷವಾಗಿ 35ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ಸಮಾಜ ಸೇವಕ, ಪತ್ರಕರ್ತ ವಿ.ವಿ.ಅರುಣ್ ಕುಮಾರ್ ಅವರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು. ಗೋಣಿಕೊಪ್ಪಲು ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಮಾಜ ಸೇವಾ ವಿಭಾಗ ಮತ್ತು ಜಿಲ್ಲಾ ರಕ್ತನಿಧಿ ಕೇಂದ್ರದ ವತಿಯಿಂದ ಈ ಶಿಬಿರ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.