ಸೋಮವಾರಪೇಟೆ: ತಥಾಸ್ತು ಸಾತ್ವಿಕ ಸಂಸ್ಥೆ, ಅಬಕಾರಿ ಇಲಾಖೆ, ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಮಾ.24ರ ಬೆಳಗ್ಗೆ 9 ಗಂಟೆಗೆ ಮಹಿಳಾ ಸಹಕಾರ ಸಂಘದ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ತಥಾಸ್ತು ಸಂಸ್ಥೆಯ ಅಧ್ಯಕ್ಷ ಉದಯ ಮಾಳವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.