ನವದೆಹಲಿ: (BMW hits motorcycle ) ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವೇಗವಾಗಿ ಬಂದ ಬಿಎಂಡಬ್ಲ್ಯು ಕಾರು ಬೈಕ್ಗೆ ಡಿಕ್ಕಿ ಹೊಡೆದಿದ್ದು, ಈ ಅಪಘಾತದಲ್ಲಿ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿ ನವಜೋತ್ ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧೌಲಾ ಕುವಾನ್ ಬಳಿಯ ರಿಂಗ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.
ದೆಹಲಿ ಕಂಟೋನ್ಮೆಂಟ್ ಮೆಟ್ರೋ ನಿಲ್ದಾಣದ ಬಳಿ ಬಿಎಂಡಬ್ಲ್ಯು ಕಾರು ಅವರ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೃತರ ಪತ್ನಿ ಹಾಗೂ ಕಾರಿನಲ್ಲಿದ್ದ ದಂಪತಿಯೂ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ಮೃತರನ್ನು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್ ಎಂದು ಗುರುತಿಸಲಾಗಿದೆ. ಅವರು ದೆಹಲಿಯ ಹರಿ ನಗರ ನಿವಾಸಿಯಾಗಿದ್ದರು. ಮಹಿಳೆಯೊಬ್ಬರು ಕಾರನ್ನು ಚಾಲನೆ ಮಾಡುತ್ತಿದ್ದಾಗ ಹಿಂದಿನಿಂದ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಹಣಕಾಸು ಸಚಿವಾಲಯದ ಅಧಿಕಾರಿ ನವಜೋತ್ ಸಿಂಗ್ ಮೋಟಾರ್ ಸೈಕಲ್ ಚಲಾಯಿಸುತ್ತಿದ್ದರು. ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯುವ ಬದಲು, ಅಪಘಾತ ಸ್ಥಳದಿಂದ 17 ಕಿ.ಮೀ ದೂರದಲ್ಲಿರುವ ಜಿಟಿಬಿ ನಗರದಲ್ಲಿರುವ ನ್ಯೂಲೈಫ್ ಆಸ್ಪತ್ರೆಗೆ ಅವರನ್ನು ಮೃತವಾಗಿ ಕರೆತರಲಾಯಿತು. ಮೃತರ ಪತ್ನಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ: Noida Case | ನಿಮಗೆ ತೊಂದರೆ ಕೊಡಲು ಇಷ್ಟವಿಲ್ಲ..ಪತ್ರ ಬರೆದಿಟ್ಟು ಸಾವಿಗೆ ಶರಣಾದ ತಾಯಿ ಮಗ; ನೋಯ್ಡಾದಲ್ಲೊಂದು ಮನಕಲುಕುವ ಘಟನೆ
ಅಪಘಾತದಲ್ಲಿ ಬಿಎಂಡಬ್ಲ್ಯೂ ಚಾಲಲಾಯಿಸುತ್ತಿದ್ದ ಮಹಿಳೆ ಮತ್ತು ಅವರ ಪತಿ ಕೂಡ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರೂ ಗುರುಗ್ರಾಮ್ ನಿವಾಸಿಗಳು. ಅಪಘಾತಕ್ಕೀಡಾದ ಬಿಎಂಡಬ್ಲ್ಯೂ ಮತ್ತು ಮೋಟಾರ್ ಸೈಕಲ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.