ನ್ಯೂಸ್

ಗಂಗಾನದಿಯಲ್ಲಿ ಮಗುಚಿದ ದೋಣಿ..6 ಮಂದಿ ನಾಪತ್ತೆ

ಪಾಟ್ನಾ: ಬಿಹಾರದಲ್ಲಿ ಭೀಕರ ದುರಂತವೊಂದು ನಡೆದಿದೆ. ಪಾಟ್ನಾದ ಉಮಾನಾಥ್ ಗಂಗಾ ಘಾಟ್ ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ಗಂಗಾನದಿಯಲ್ಲಿ ಮುಳುಗಿದೆ. ಭಾನುವಾರ ಬೆಳಗ್ಗೆ 9.15ರ ಸುಮಾರಿಗೆ ನಡೆದ ಈ ದುರ್ಘಟನೆಯಲ್ಲಿ ಆರು ಮಂದಿ ನಾಪತ್ತೆಯಾಗಿದ್ದಾರೆ.

ನತದೃಷ್ಟ ಬೋಟ್ ನೀರಿನಲ್ಲಿ ಮುಳುಗಿದಾಗ ಒಂದೇ ಕುಟುಂಬದ ಸುಮಾರು 17 ಮಂದಿ ಅದರಲ್ಲಿ ಪ್ರಯಾಣಿಸುತ್ತಿದ್ದರು ಎಂದು ಬಾರ್ಹ್ ಉಪವಿಭಾಗಾಧಿಕಾರಿ ತಿಳಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ 11 ಮಂದಿಯನ್ನು ರಕ್ಷಿಸಲಾಗಿದ್ದು, ಆರು ಜನ ಇನ್ನೂ ನಾಪತ್ತೆಯಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಎನ್‌ಡಿಆರ್‌ಎಫ್ ತಂಡವೂ ಆಗಮಿಸಿದ್ದು, ಕಾರ್ಯಾಚರಣೆಗೆ ಸೇರಿಕೊಂಡಿದೆ ಎಂದು ಅವರು ಹೇಳಿದರು.