ನ್ಯೂಸ್

ಬಾಲಿವುಡ್​ ನಟ ಸುಶಾಂತ್ ಸಿಂಗ್ ರಜಪೂತ್ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಆತ್ಮಹತ್ಯೆ ಪ್ರಕರಣ; ಎಸ್​ಐಟಿ ತನಿಖೆ ಶುರು

ಮುಂಬೈ: ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮುಂಬೈ  ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಯನ್ನು ಪ್ರಾರಂಭಿಸಿದೆ.

ಶುಕ್ರವಾರ ಎಸ್​ಐಟಿ ತಂಡವು ಮಲಾಡ್‌ನ ಅಪಾರ್ಟ್‌ಮೆಂಟ್‌ಗೆ ತೆರಳಿ ಪರಿಶೀಲನೆ ನಡೆಸಿದೆ. ಇಲ್ಲಿಂದಲೇ ದಿಶಾ ಸಾಲಿಯಾನ್ ಬಿದ್ದು ಸಾವನ್ನಪ್ಪಿದ್ದಾಳೆ.

ಜೂನ್ 8, 2020 ರಂದು ದಿಶಾ ಶವವಾಗಿ ಪತ್ತೆಯಾಗಿದ್ದಳು. ಸುಶಾಂತ್ ಸಿಂಗ್​ (34) ಮುಂಬೈನ ಉಪನಗರ ಬಾಂದ್ರಾದಲ್ಲಿನ ತನ್ನ ಫ್ಲಾಟ್‌ನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಕೆಲ ದಿನಗಳ ಮೊದಲು ದಿಶಾ ಸತ್ತಿದ್ದಳು. ಪೊಲೀಸರು ಆಕಸ್ಮಿಕ ಸಾವಿನ ವರದಿಯನ್ನು ದಾಖಲಿಸಿದ್ದಾರೆ. June 14, 2020ರಂದು ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದರು.

ಹೆಚ್ಚುವರಿ ಪೊಲೀಸ್ ಆಯುಕ್ತ (ಉತ್ತರ) ರಾಜೀವ್ ಜೈನ್ ಎಸ್‌ಐಟಿಯ ನೇತೃತ್ವ ವಹಿಸಿದ್ದಾರೆ. ಮಾಲ್ವಾನಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಚಿಮಾಜಿ ಅಧವ್ ಮತ್ತು ಅವರ ತಂಡವು ತನಿಖೆ ನಡೆಸುತ್ತಿದೆ. ಉಪ ಪೊಲೀಸ್ ಆಯುಕ್ತ ಅಜಯ್‌ಕುಮಾರ್ ಬನ್ಸಾಲ್ ಅವರ ಮೇಲ್ವಿಚಾರಣೆ ವಹಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಿಶಾ ಸಾವಿನ ಪ್ರಕರಣದಲ್ಲಿ ಮುಂಬೈ ಪೊಲೀಸರು ಸುದೀರ್ಘ ತನಿಖೆ ನಡೆಸಿ, 2021 ರಲ್ಲಿ ಅಂತಿಮ ವರದಿ ಸಲ್ಲಿಸಿದ್ದರು. ಇದರಲ್ಲಿ ಯಾವುದೇ ಕೈವಾಡ ಇಲ್ಲ

ಆದರೆ, ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ದಿಶಾ ಸಾವಿನ ತನಿಖೆಗೆ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವುದಾಗಿ ಕಳೆದ ವರ್ಷ ರಾಜ್ಯ ಸರ್ಕಾರ ಘೋಷಿಸಿತ್ತು.

ಪವಿತ್ರ ರಿಶ್ತಾ ಟಿವಿ ಧಾರವಾಹಿಯಲ್ಲಿ ಮಾನವ ಪಾತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ಸುಶಾಂತ್ ನಂತರ ಹಲವಾರು ಬಾಲಿವುಡ್​ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದರು.