ಹಾವೇರಿ: ಹಾನಗಲ್ ಪಟ್ಟಣದ ಶ್ರೀ ಕುಮಾರೇಶ್ವರ ಮಠದಲ್ಲಿ ಬಾಂಬ್ ಇಡಲಾಗಿದೆ ಎಂದು 112 ಸಹಾಯವಾಣಿಗೆ ಅಪರಿಚಿತರ ಕರೆ ಬಂದ ಹಿನ್ನೆಲೆಯಲ್ಲಿ, ಇಂದು (ಸೆ.12) ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಹಾಗೂ ಪೊಲೀಸರು ತಪಾಸಣೆ ನಡೆಸಿದ್ದಾರೆ.
ಇದನ್ನೂ ಓದಿ: ಪ್ರತಿಕೂಲ ಹವಾಮಾನದಿಂದಾಗಿ ಸ್ಥಗಿತಗೊಂಡಿದ್ದ ‘ವೈಷ್ಣೋದೇವಿ ಯಾತ್ರೆ’ ಸೆ.14 ರಿಂದ ಪುನರಾರಂಭ| vaishnodevi
ಕರೆ ಮಾಡಿದ ವ್ಯಕ್ತಿ ಹಾನಗಲ್ ಕುಮಾರೇಶ್ವರ ಮಠದಲ್ಲಿ ಬಾಂಬ್ ಇಡಲಾಗಿದೆ, ಅದು ಸದ್ಯದಲ್ಲೇ ಸ್ಫೋಟವಾಗುತ್ತೆ ಎಂದು ಹೇಳಲಾಗಿದೆ. ಈ ಬಗ್ಗೆ ಎಚ್ಚೆತ್ತುಕೊಂಡ ಪೊಲೀಸರು ಅನಾಮಧೇಯ ಕರೆ ಬಂದ ಕೂಡಲೇ ಎಎಸ್ಸಿ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ. ಬಳಿಕ ಇದು ಹುಸಿ ಬಾಂಬ್ ಕರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: Modi Manipur Visit | ನಾಳೆ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ; 8,500 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ!
(ಏಜೆನ್ಸೀಸ್)
ಈ ಬೆದರಿಕೆ ಕರೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ. ಮಠದ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಎರಡು ಗುಂಪಿನ ನಡುವೆ ವಾಗ್ವಾದ ನಡೆಯುತ್ತಿದೆ. ಹಾಗಾಗಿ ಈ ಕಾರಣದಿಂದಲೇ ಕಿಡಿಗೇಡಿಗಳು ಕರೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನಿಸಿದ್ದಾರೆ.