ನವದೆಹಲಿ; ಶಾಲೆಗಳನ್ನು ಸ್ಪೋಟಿಸುವುದಾಗಿ ನಕಲಿ ಬೆದರಿಕೆ ಕರೆ ಕಳುಹಿಸಿದ 12 ವರ್ಷದ ಅಪ್ರಾಪ್ತ ಬಾಲಕನನ್ನು ಇಂದು (16) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಷ್ಟ್ರರಾಜಧಾನಿಯ ಶಿಕ್ಷಣ ಸಂಸ್ಥೆಗಳಾದ ದೆಹಲಿ ವಿಶ್ವವಿದ್ಯಾಲಯದ ಸೇಂಟ್ ಸ್ಟೀಫನ್ಸ್ ಕಾಲೇಜು ಮತ್ತು ಸೇಂಟ್ ಥಾಮಸ್ ಶಾಲೆಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಕರೆಗಳು ಬಂದ ಒಂದು ದಿನದ ನಂತರ ಆತನನ್ನು ಬಂಧಿಸಲಾಗಿದೆ. ಬಾಲಕನನ್ನು ವಶಕ್ಕೆ ಪಡೆದ ನಂತರ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
ದೆಹಲಿಯ ಐದು ಪ್ರಮುಖ ಶಾಲೆಗಳಿಗೆ ಬಾಂಬ್ ಬೆದರಿಕೆಯ ಸಂದೇಶ ಬಂದಿದ್ದು, ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಭಯವನ್ನು ಉಂಟುಮಾಡಿದೆ. ದ್ವಾರಕಾದ ಸೇಂಟ್ ಥಾಮಸ್ ಶಾಲೆ ಮತ್ತು ವಸಂತ್ ಕುಂಜ್‌ನ ವಸಂತ್ ವ್ಯಾಲಿ, ಹೌಜ್ ಖಾಸ್‌ನಲ್ಲಿರುವ ಮದರ್ ಇಂಟರ್‌ನ್ಯಾಷನಲ್, ಲೋಧಿ ಎಸ್ಟೇಟ್‌ನಲ್ಲಿರುವ ಸರ್ದಾರ್ ಪಟೇಲ್ ವಿದ್ಯಾಲಯ ಹಾಗೂ ಪಶ್ಚಿಮ ವಿಹಾರ್‌ನಲ್ಲಿರುವ ರಿಚ್‌ಮಂಡ್ ಗ್ಲೋಬಲ್ ಶಾಲೆಗೆ ಇಂದು (16) ಬೆಳಗ್ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ.
ಇದನ್ನೂ ಓದಿ: NCERT 8ನೇ ತರಗತಿ ಪಠ್ಯ ಪುಸ್ತಕದಲ್ಲಿ ಬದಲಾವಣೆ; ಸುಲ್ತಾನರ ಕ್ರೌರ್ಯ, ಮೊಘಲರ ಅಸಹಿಷ್ಣುತೆ ಉಲ್ಲೇಖ|ncert
(ಏಜೆನ್ಸೀಸ್)
ಸೇಂಟ್ ಥಾಮಸ್ ಶಾಲೆಗೆ ಕಳೆದ 24 ಗಂಟೆಗಳಲ್ಲಿ ಎರಡನೇ ಬಾರಿ ಬಾಂಬ್ ಬೆದರಿಕೆ ಹಾಕಲಾಗಿದೆ. ಇತರೆ ಉಳಿದ ಶಾಲೆಗಳಿಗೆ ಹತ್ತು ಬಾಂಬ್ ಬೆದರಿಕೆಯ ಇಮೇಲ್‌ಗಳು ಬಂದಿವೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಬೆದರಿಕೆ ಕರೆ ಬಂದ ಕೂಡಲೇ ಶಾಲಾ ಅಧಿಕಾರಿಗಳು, ಕಾನೂನು ಜಾರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ದೆಹಲಿ ಪೊಲೀಸರು ಎರಡೂ ಸ್ಥಳಗಳಿಗೆ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಸೈಬರ್ ತಜ್ಞರನ್ನು ನಿಯೋಜಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲಾಗಿದೆ.