Mumbai Airport: ಪಾಕಿಸ್ತಾನ ಉಗ್ರರನ್ನು ಮಟ್ಟಹಾಕಲು ಭಾರತೀಯ ಸೇನೆಯೂ ಆಪರೇಷನ್ ಸಿಂಧೂರ ದಾಳಿ ನಡೆಸಿದ ನಂತರ ಮುಂಬೈನ ಸಹರ್ ವಿಮಾನ ನಿಲ್ದಾಣಕ್ಕೆ ಬುಧವಾರ (ಮೇ.7) ಬಾಂಬ್ ಬೆದರಿಕೆ ಕರೆ ಬಂದಿದೆ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ಸ್ವಲ್ಪ ಸಮಯದ ನಂತರ ಮುಂಬೈನ ಸಹರ್ ವಿಮಾನ ನಿಲ್ದಾಣದ ಹಾಟ್‌ಲೈನ್‌ಗೆ ಫೋನ್ ಕರೆ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಇಂಡಿಗೊ ವಿಮಾನದಲ್ಲಿ ಸ್ಫೋಟಕ ಸಾಧನದ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ”ಅಭಿ ಪಿಕ್ಚರ್ ಬಾಕಿ ಹೈ” ಎಂದ ಮಾಜಿ ಸೇನಾ ಮುಖ್ಯಸ್ಥ ನವರನೆ: ಭಯೋತ್ಪಾದಕರಿಗೆ ಮುಂದೈತೆ ಮಾರಿಹಬ್ಬ! | Operation Sindhura
ನಂತರ ಭದ್ರತಾ ಸಂಸ್ಥೆಗಳು ತಕ್ಷಣದ ತುರ್ತು ಪ್ರತಿಕ್ರಿಯೆಯನ್ನು ಪ್ರಾರಂಭಿಸಿ ಪ್ರಯಾಣಿಕರು ಮತ್ತು ಸಿಬ್ಬಂದಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿಮಾನ ನಿಲ್ದಾಣದಲ್ಲಿ ತಪಾಸಣೆ ಮತ್ತು ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ಬಾಂಬ್ ಬೆದರಿಕೆ ಬಗ್ಗೆ ತನಿಖೆ ಮುಂದುವರೆಯುತ್ತಿದ್ದು, ಇತ್ತೀಚಿನ ಸೇನಾ ಕಾರ್ಯಾಚರಣೆಗಳಿಗೆ ಈ ಬೆದರಿಕೆ ಸಂಬಂಧಿಸಿದೆಯೇ ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.
ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ ಘಟನೆಗೆ ಪ್ರತಿಯಾಗಿ ಉಗ್ರರರನ್ನು ಮಟ್ಟಹಾಕಲು ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಮೂಲಕ ದಿಟ್ಟ ಹೆಜ್ಜೆ ಇಟ್ಟಿದೆ. (ಏಜೆನ್ಸೀಸ್)