ಆಗ್ರಾ; ಉತ್ತರ ಪ್ರದೇಶದ ಆಗ್ರಾದಲ್ಲಿರುವ ಎರಡು ಖಾಸಗಿ ಶಾಲೆಗಳಾದ ಶ್ರೀ ರಾಮ್ ಸ್ಕೂಲ್ ಮತ್ತು ಗ್ಲೋಬಲ್ ಸ್ಕೂಲ್‌ಗೆ ಇಂದು (ಜುಲೈ 23) ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಇದು ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ.
ಇದನ್ನೂ ಓದಿ: ಉಪರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನಕರ್ ರಾಜೀನಾಮೆ: ಇದು ಷಡ್ಯಂತ್ರ ಎಂದ ಮಲ್ಲಿಕಾರ್ಜುನ ಖರ್ಗೆ! Jagdeep Dhankhar
ಎರಡೂ ಶಾಲೆಗಳನ್ನು ಸಂಪೂರ್ಣವಾಗಿ ಶೋಧಿಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಸಹಾಯಕ ಪೊಲೀಸ್ ಆಯುಕ್ತ ವಿನಾಯಕ ಭೋಸಲೆ ತಿಳಿಸಿದ್ದಾರೆ. ಕೂಲಂಕುಶ ತಪಾಸಣೆಯ ಬಳಿಕ, ನಮಗೆ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ. ಸಾಮಾನ್ಯ ತರಗತಿಗಳು ಪುನರಾರಂಭಗೊಂಡಿವೆ ಮತ್ತು ವಿದ್ಯಾರ್ಥಿಗಳು ಎಂದಿನಂತೆ ತಮ್ಮ ಅಧ್ಯಯನವನ್ನು ಮುಂದುವರಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನೂ ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಅಧಿಕಾರಿಗಳು ಬಾಂಬ್ ನಿಷ್ಕ್ರಿಯ ಘಟಕಗಳು ಮತ್ತು ಶ್ವಾನ ದಳಗಳನ್ನು ಒಳಗೊಂಡ ಪೂರ್ಣ ಪ್ರಮಾಣದ ಭದ್ರತಾ ಕಾರ್ಯಾಚರಣೆಯನ್ನು ತ್ವರಿತವಾಗಿ ಪ್ರಾರಂಭಿಸಿದ್ದಾರೆ. ಇಮೇಲ್‌ಗಳ ಮೂಲವನ್ನು ಪತ್ತೆಹಚ್ಚಲು ಆಗ್ರಾ ಪೊಲೀಸರ ಸೈಬರ್ ಸೆಲ್ ತಂಡ ತನಿಖೆ ಆರಂಭಿಸಿದೆ. ಪ್ರಾಥಮಿಕ ಸಂಶೋಧನೆಗಳ ಪ್ರಕಾರ ಇಮೇಲ್‌ಗಳನ್ನು ಕೋಲ್ಕತ್ತಾದಿಂದ ಕಳುಹಿಸಲಾಗಿದೆ ಎಂದು ಶಂಕಿಸಲಾಗಿದೆ ಎಂದು ಎಸಿಪಿ ಭೋಸಲೆ ತಿಳಿಸಿದ್ದಾರೆ.
ಇದನ್ನೂ ಓದಿ: ಹಣ ಖರ್ಚು ಮಾಡದೇ ಅಂದ ಹೆಚ್ಚಿಸಿಕೊಳ್ಳುವುದು ಹೇಗೆ? ಮೃನಾಲ್ ಠಾಕೂರ್ ಸೌಂದರ್ಯ ರಹಸ್ಯ ಬಯಲು! Mrunal Thakur
(ಏಜೆನ್ಸೀಸ್)
ಶುಕ್ರವಾರ ದೆಹಲಿಯಾದ್ಯಂತ 45 ಕ್ಕೂ ಹೆಚ್ಚು ಶಾಲೆಗಳು ಮತ್ತು ಮೂರು ಕಾಲೇಜುಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ವಿದ್ಯಾರ್ಥಿಗಳು, ಪೋಷಕರು ಮತ್ತು ಶಾಲಾ ಸಿಬ್ಬಂದಿಗಳಲ್ಲಿ ವ್ಯಾಪಕ ಭೀತಿ ಉಂಟಾಗಿದೆ. ಕೇವಲ ಒಂದು ವಾರದಲ್ಲಿ ನಡೆದ ನಾಲ್ಕನೇ ಘಟನೆ ಇದಾಗಿದ್ದು, ರಾಷ್ಟ್ರ ರಾಜಧಾನಿಯ ಕುಟುಂಬಗಳಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.