ನ್ಯೂಸ್

ಸುಳ್ಳಿಗೆ ಮತ್ತೊಂದು ಹೆಸರೆ ಬೊಮ್ಮಾಯಿ: ಡಿಕೆಶಿ ಟೀಕೆ

Bengaluru - Political - Shivananda Tagadur

ಬೆಂಗಳೂರು:
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡುತ್ತಿರುವುದನ್ನು ನೋಡಿದರೆ,
ಸುಳ್ಳಿಗೆ ಮತ್ತೊಂದು ಹೆಸರೇ ಬೊಮ್ಮಾಯಿ ಅವರು ಎನ್ನುವಂತಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರದ ಪ್ರಸ್ತಾವನೆಯೇ ಸರಿಯಾಗಿಲ್ಲ ಎಂಬ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಈ ರೀತಿ ಬೊಮ್ಮಾಯಿ ಆಗಬಾರದು ಎಂದರು.
ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲೇ ಭದ್ರಾ ಮೇಲ್ದಂಡೆ ಯೋಜನೆಯನ್ನು ಬಜೆಟ್‌ನಲ್ಲಿ ಅವರು ಸೇರಿಸಿಕೊಂಡರು. ನಮ್ಮ ಪ್ರಸ್ತಾವನೆ ಸರಿಯಾಗಿಲ್ಲ ಎಂದಾದರೆ ಅವರ ಬಳಿಯೇ ಹೋಗಿ ಹೇಗೆ ಬರೆಯಬೇಕು ಎಂದು ಅವರಿಂದಲೇ ಕೇಳಿ ಬರೆದು ಕೊಡುತ್ತೇವೆ ಎಂದರು.
ಬೊಮ್ಮಾಯಿ ಅವರು ಸಹ ನೀರಾವರಿ ಸಚಿವರಾಗಿದ್ದವರು. ರಾಷ್ಟ್ರೀಯ ಯೋಜನೆ ಮಾಡಿ ಎಂದು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಕ್ಯಾಬಿನೆಟ್ ಮುಂದೆ ಇಟ್ಟುಕೊಂಡರೇ ಹೊರತು ಬೇಕಂತಲೇ ಕೇಂದ್ರದಿಂದ ಹಣ ಬಿಡುಗಡೆ ಮಾಡಲಿಲ್ಲ. ಮಾಜಿ ಸಂಸದರಾದ ನಾರಾಯಣಸ್ವಾಮಿ ಅವರು ನನ್ನ ಬಳಿ ಬಂದು ರಾಷ್ಟ್ರೀಯ ಯೋಜನೆಯಾಗಲಿ ಎಂದು ಬರೆಸಿಕೊಂಡು ಹೋದರು. ಸುಮ್ಮನೆ ಏನೇನೋ ಹೇಳಬಾರದು. ಬೊಮ್ಮಾಯಿ ಅವರು ಫೇಲ್ ಆಗಿದ್ದಾರೆ ಎಂದರು.