ಬೆಂಗಳೂರು: ಉಪ ಚುನಾವಣೆಗೆ ಸ್ಪರ್ಧಿಸುವ ಆಸಕ್ತಿಯಿದ್ದಿಲ್ಲ, ಪಕ್ಷದ ಟಿಕೆಟ್ ಕೂಡ ಕೇಳಿರಲಿಲ್ಲ. ಆದರೆ ಪಕ್ಷದ ವರಿಷ್ಠರು ಏನೋ ಒಂದು ಲೆಕ್ಕಾಚಾರ ಮಾಡಿ ಕೈಗೊಂಡ ನಿರ್ಧಾರಕ್ಕೆ ತಲೆಬಾಗುವೆ ಎಂದು ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದ ಬಿಜೆಪಿ ನಿಯೋಜಿತ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದರು.
ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಮತ್ತು ರಾಜ್ಯ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ಬಹುದೊಡ್ಡ ಅವಕಾಶ ಕೊಟ್ಟಿದ್ದಾರೆ. ತಂದೆ- ತಾಯಿ ಆಶೀರ್ವಾದದ ಲವೂ ಮುಖ್ಯವಾಗಿದೆ ಎಂದರು.
ತಂದೆಯ ಪರವಾಗಿ 2018ರ ವಿಧಾನಸಭೆ ಚುನಾವಣೆಯಲ್ಲಿ ಕೆಲಸ ಮಾಡಿದ್ದೇನೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಪ್ರತಿ ಮನೆಗೆ ತೆರಳಿ ಪ್ರಚಾರ ಮಾಡಿರುವೆ. ಲೋಕಸಭೆ ಚುನಾವಣೆ ವೇಳೆ ಕ್ಷೇತ್ರಾದ್ಯಂತ ತಂದೆಯ ಪರವಾಗಿ ಪ್ರಚಾರ ಮಾಡಿರುವೆ ಎಂದು ತಮ್ಮ ಅನುಭವ ಹೇಳಿಕೊಂಡರು.
ಶಿಗ್ಗಾಂವಿ-ಸವಣೂರು ವಿಧಾನಸಭೆ ಕ್ಷೇತ್ರದ ಜನರ ಒಡನಾಟವಿದೆ. ಎಲ್ಲ ಟಿಕೆಟ್ ಆಕಾಂಕ್ಷಿಗಳು, ಕ್ಷೇತ್ರದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಲಿದ್ದಾರೆ.
ಜತೆಗೆ ನಮ್ಮ ತಂದೆಯವರು ಮಾಡಿದ ಅಭಿವೃದ್ಧಿ ಕೆಲಸಗಳು, ಕ್ಷೇತ್ರದ ಜನರ ಆಶೀರ್ವಾದ ಗೆಲುವಿನ ದಡ ಸೇರಿಸಲಿವೆ ಎಂದು ಭರತ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ನಂತರ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿವಾಸಕ್ಕೆ ತೆರಳಿ ಅವರನ್ನು ಸತ್ಕರಿಸಿ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದ ಸಲ್ಲಿಸಿದ ಭರತ್ ಬೊಮ್ಮಾಯಿ, ಪಕ್ಷದ ರಾಜ್ಯ ಕಚೇರಿಗೆ ಭೇಟಿ ನೀಡಿ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಂದ ಬಿ ಾರ್ಮ್ ಪಡೆದರು.