ನ್ಯೂಸ್

ಸಿದ್ದರಾಮಯ್ಯ ಬರುವುದಾದರೆ ಆಳಂದ ಕ್ಷೇತ್ರ ಬಿಟ್ಟು ಕೊಡುವೆ: ಬಿ.ಆರ್ ಪಾಟೀಲ್

ಕಲಬುರಗಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಆಳಂದ ಕ್ಷೇತ್ರದಿಂದ ಸ್ಪರ್ಧಿಸಲು ಅಸಕ್ತಿ ತೋರಿದರೆ ಕ್ಷೇತ್ರ ಬಿಟ್ಟು ಕೊಡಿಲುವುದಾಗಿ ಮಾಜಿ ಉಪ ಸಭಾಪತಿ ಬಿ.ಆರ್. ಪಾಟೀಲ್ ಹೇಳಿದರು. ಈ ಹೇಳಿಕೆ ನೋಡಿದರೆ ಸಿದ್ದರಾಮಯ್ಯ ಅವರು ಮತ್ತೊಂದು ಸಲ ಉತ್ತರದಿಂದ ಸ್ಪರ್ಧಿಸಬಹುದು.

ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯ ಅವರು ನಾಮಪತ್ರ ಸಲ್ಲಿಸಿದರೆ ಸಾಕು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮದು ಎಂದರು.

ಆಳಂದ ಕ್ಷೇತ್ರ ಸಿದ್ದರಾಮಯ್ಯ ಅವರಿಗೆ ಬಿಟ್ಟು ಕೊಟ್ಟು, ತಾವು ಕ್ಷೇತ್ರ ತ್ಯಾಗ ಮಾಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಆದರೆ ಇನ್ನೊಂದು ಸಲ ಸಿಎಂ ಆಗುವ ಆಸೆ ಹೊಂದಿದ್ದಾರೆ. ಹೀಗಾಗಿ ಆಳಂದ ಕ್ಕೆ ಬಂದರೆ ಕೊಡ ಹಾಲು ಕುಡಿದಷ್ಟು ಸಂತೋಷವಾಗುತ್ತದೆ ಎಂದು ಹೇಳಿದರು.

ಐದನೇ ಗ್ಯಾರಂಟಿ: ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಸ್ಕೀಮ್​​ಗಳಿಂದ ಬಿಜೆಪಿ ಥಂಡಾ ಹೊಡೆದಿದೆ.‌ ಐದನೇ ಗ್ಯಾರಂಟಿ ಯಾಗಿ ರೈತರ ಕೃಷಿ ಸಾಲ ಮನ್ನಾ ಸೇರಬಹುದು ವಿಶಾಲ ಎಂದು ಬಿ.ಆರ್. ಪಾಟೀಲ್ ಸುಳಿವು ನೀಡಿದರು.

ಬಿಜೆಪಿಯ ಇನ್ನಷ್ಟು ವಿಕೆಟ್ ಪತನ: ಮಾಜಿ ಸಚಿವ ಬಾಬುರಾವ ಚಿಂಚನಸೂರ ಅವರಂತೆ ಇನ್ನಷ್ಟು ಬಿಜೆಪಿಯ ವಿಕೆಟ್‌ಗಳು ಪತನವಾಗಲಿವೆ. ಕಾದು ನೋಡಿ ಎಂದರಲ್ಲದೇ ಯಾರ್ಯಾರು ಬರ್ತಾರೆಂದರೆ ಊಹಿಸಿಕೊಳ್ಳಲು ಸಾಧ್ಯವಿಲ್ಲ ದಷ್ಟು ಬಿಜೆಪಿಯವರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದು ಬಿಅರ್ ತಿಳಿಸಿದರು.

ಕಳೆದ ನಾಲ್ಕು ದಿನಗಳ ಹಿಂದೆ ಜಿಲ್ಲೆಯಲ್ಲಿ ಅದರಲ್ಲೂ ಆಳಂದ ತಾಲೂಕಿನ ಸುರಿದ ಅಕಾಲಿಕ ಆಲಿಕಲ್ಲು ಮಳೆಗೆ ಸೂಕ್ತ ಪರಿಹಾರ ನೀಡುವಂತೆ ರಾಜ್ಯಪಾಲರಿಗೆ ಪತ್ರ ಬರೆದಿರುವುದಾಗಿ ತಿಳಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಸಿದ್ದರಾಮ ಪ್ಯಾಟಿ, ಗಣೇಶ ಪಾಟೀಲ್ ಇದ್ದರು.