ಗಂಜಿಮಠ ಸಮೀಪದ ಮಳಲಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಪುನಃ ನಿರ್ಮಾಣದ ಹಿನ್ನೆಲೆಯಲ್ಲಿ ಕ್ಷೇತ್ರದ ನಾಗಾಲಯದಲ್ಲಿ ಭಾನುವಾರ ಶ್ರೀ ನಾಗಬ್ರಹ್ಮ, ರಕ್ತೇಶ್ವರಿ, ನಂದಿಗೋಣ, ಕ್ಷೇತ್ರಪಾಲ ಸಾನ್ನಿಧ್ಯಗಳ ಪುನಃ ಪ್ರತಿಷ್ಠಾಪನಾ ಬ್ರಹ್ಮಕಲಶ ನಡೆಯಿತು. 
ನ್ಯೂಸ್

ಮಳಲಿಯಲ್ಲಿ ಪುನಃ ಪ್ರತಿಷ್ಠಾಪನಾ ಬ್ರಹ್ಮಕಲಶ

Santhosh Krishna K M

ಪ್ರಮುಖ ಮುಖ್ಯಾಂಶಗಳು

  • ನಾಗಾಲಯದಲ್ಲಿ ಪುನಃ ಪ್ರತಿಷ್ಠಾಪನಾ ಬ್ರಹ್ಮಕಲಶ
  • ಗಂಜಿಮಠ ಸಮೀಪದ ಮಳಲಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನ
ಗುರುಪುರ: ಗಂಜಿಮಠ ಸಮೀಪದ ಮಳಲಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಪುನಃ ನಿರ್ಮಾಣದ ಹಿನ್ನೆಲೆಯಲ್ಲಿ ಪೊಳಲಿ ಸುಬ್ರಹ್ಮಣ್ಯ ತಂತ್ರಿಗಳ ಮಾರ್ಗದರ್ಶನದಲ್ಲಿ ಕ್ಷೇತ್ರದ ನಾಗಾಲಯದಲ್ಲಿ ಭಾನುವಾರ ಶ್ರೀ ನಾಗಬ್ರಹ್ಮ, ರಕ್ತೇಶ್ವರಿ, ನಂದಿಗೋಣ, ಕ್ಷೇತ್ರಪಾಲ ಸಾನ್ನಿಧ್ಯಗಳ ಪುನಃ ಪ್ರತಿಷ್ಠಾಪನಾ ಬ್ರಹ್ಮಕಲಶ ನಡೆಯಿತು.
ಶನಿವಾರ ಸಂಜೆ ವಿಶೇಷ ಪೂಜಾ ವಿಧಿವಿಧಾನಗಳು ನಡೆದಿದ್ದವು. ಭಾನುವಾರ ಬೆಳಗ್ಗೆ ಪುಣ್ಯಾಹ, ಗಣಪತಿ ಹೋಮ, ಸಾನ್ನಿಧ್ಯಗಳ ಪ್ರತಿಷ್ಠಾಪನಾ ಹೋಮ, ಕಲಶ ಪೂಜೆ ಮತ್ತಿತರ ಪೂಜೆಗಳು ನಡೆದ ಬಳಿಕ 9.43ರ ಮಿಥುನ ಸುಮುಹೂರ್ತದಲ್ಲಿ ಪ್ರತಿಷ್ಠಾಪನಾ ಕಲಶಾಭಿಷೇಕ ನಡೆಯಿತು. ಮಧ್ಯಾಹ್ನ ಮಹಾಪೂಜೆಯ ನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಪ್ರಶಾಂತ್ ಕುಮಾರ್ ಜೈನ್ ಕಟ್ಟೆಮಾರ್, ಕಾರ್ಯಾಧ್ಯಕ್ಷ ಭಾಸ್ಕರ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇಖರ ಜೋಗಿ ಮಟ್ಟಿ, ಟ್ರಸ್ಟ್ ಅಧ್ಯಕ್ಷ ಭಾಸ್ಕರ ಕುಲಾಲ್, ಪ್ರೇಮಚಂದ್ರ ನಾಯಕ್, ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಬೂಬ ಪೂಜಾರಿ, ಜಯಾನಂದ ನಾಯ್ಕ ಮೊಗರು ಹಾಗೂ ಸಮಿತಿ ಸದಸ್ಯರು, ಭಕ್ತರು ಇದ್ದರು.