ಬೆಂಗಳೂರು
6ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಾಹ್ಮಣ ಸಮುದಾಯದ ಭಾವನೆಗಳಿಗೆ ದಕ್ಕೆ ತರುವಂತಹ ಪಠ್ಯಭಾಗವನ್ನು ತಕ್ಷಣದಿಂದಲೇ ತೆಗೆದು ಹಾಕಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯ ಪಠ್ಯಕ್ರಮದ 6ನೇ ತರಗತಿಯ ಸಮಾಜ ವಿಜ್ಞಾನ ಭಾಗ 1ರಲ್ಲಿ ಪಾಠ 7ರ ಅಂಶಗಳಲ್ಲಿ ಬ್ರಾಹ್ಮಣ ಜನಾಂಗದ ಭಾವನೆಗಳಿಗೆ ದಕ್ಕೆ ಉಂಟುಮಾಡುವ ಅಂಶಗಳಿವೆ ಎಂದು ಕೆಲವರು ನನ್ನ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಸಂಕೀರ್ಣ ಪಠ್ಯಭಾಗವನ್ನು ತಕ್ಷಣದಿಂದಲೇ ತೆಗೆದು ಹಾಕಬೇಕೆಂದು ಇಲಾಖೆ ಪ್ರಧಾನ ಕಾರ್ಯದರ್ಶಿ, ಆಯುಕ್ತರು, ರಾಜ್ಯ ಪಠ್ಯಪುಸ್ತಕ ಸಂಕ್ಕೆ ಸೂಚನೆ ನೀಡಿದ್ದಾರೆ.
1ರಿಂದ 10ನೇ ತರಗತಿಯ ಸಮಾಜ ವಿಜ್ಞಾನ, ಭಾಷಾ ವಿಷಯಳ ಯಾವುದೇ ಪಠ್ಯಗಳಲ್ಲಿ ಇರಬಹುದಾದ ಇಂತಹ ಯಾವುದೇ ಸಂಕೀರ್ಣ ವಿಷಯಗಳ ಕುರಿತು ಶಿಕ್ಷಕರು ಮತ್ತು ವಿಷಯ ತಜ್ಞರನ್ನೊಳಗೊಂಡ ಸವಿತಿ ರಚಿಸಿ ಅವರಿಂದ ವರದಿ ಪಡೆದು 15 ದಿನಗಳಲ್ಲಿ ವರದಿ ಸಲ್ಲಿಸಬೇಕೆಂದು ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ವರದಿ ಪಡೆದ ನಂತರ ವರದಿಯಲ್ಲಿ ಅಂತಹ ಪಠ್ಯಭಾಗಗಳಿದ್ದರೆ, ಅದರ ಪರಾಮರ್ಶಗೆ ತಜ್ಞರ ಸವಿತಿ ನೇಮಕ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಈ ವಿಚಾರವಾಗಿ ಮಂತ್ರಾಲಯ ಸ್ವಾಮೀಜಿ ಅವರು ನನಗೆ ದೂರವಾಣಿ ಕರೆ ಮಾಡಿ ವಿಚಾರ ತಿಳಿಸಿದರು. ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಯಾವುದೇ ಪಠ್ಯಪುಸ್ತಕಗಳ ಪರಿಷ್ಕರಣೆಯಾಗಲೀ, ಹೊಸ ಪಠ್ಯಗಳ ಸೇರ್ಪಡೆಯಾಗಲಿ ಮಾಡಿಲ್ಲ. ಈ ಹಿಂದೆ ಮಾಡಿರುವ ಮತ್ತು ಪ್ರಸ್ತುತ ಬೆಳಕಿಗೆ ಬಂದಿರುವ ಈ ಪ್ರಮಾದವನ್ನು ಸರಿಪಡಿಸಲು ಇಂದೇ ಕ್ರಮಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸಮಗ್ರ ಪಠ್ಯ ಅವಲೋಕನಕ್ಕೆ ಕ್ರಮವಹಿಸಲಾಗುತ್ತದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.