London : ಆಪರೇಷನ್ ಸಿಂಧೂರ ಅಡಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಕೈಗೊಂಡಿರುವ ಕ್ರಮಕ್ಕೆ ಬೆಂಬಲದ ಜೊತೆಗೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಶಿಬಿರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯುನೈಟೆಡ್ ಕಿಂಗ್‌ಡಂನ ಪ್ರಧಾನಿ ಕೈರ್ ಸ್ಟಾರ್ಮರ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳ ಜವಾಬ್ದಾರಿಯನ್ನು IAEA ವಹಿಸಿಕೊಳ್ಳಬೇಕು; ರಕ್ಷಣಾ ಸಚಿವ ರಾಜನಾಥ್ ಸಿಂಗ್| IAEA
"ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯ ನಂತರ, ಭಾರತವು ಆಪರೇಷನ್ ಸಿಂಧೂರ ನಡೆಸಿ, 9 ಭಯೋತ್ಪಾದಕ ನೆಲೆಗಳ ನಾಶಮಾಡಿತು. ಈಗ ಶಾಂತಿ ಮಾತುಕತೆಗಳು ಮುಂದುವರೆದಂತೆ, ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ ಭಯೋತ್ಪಾದಕ ನೆಲೆಗಳನ್ನು ತೆಗೆದುಹಾಕುವುದನ್ನು ಖಚಿತಪಡಿಸಿಕೊಳ್ಳಲು ವಿದೇಶಾಂಗ ಕಾರ್ಯದರ್ಶಿ ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿಯಬೇಕು" ಎಂದು ಅವರು ಹೌಸ್ ಆಫ್ ಕಾಮನ್ಸ್‌ನಲ್ಲಿ ಮಾತನಾಡಿದ ವಿಡಿಯೋವನ್ನು X ನಲ್ಲಿ ಹಂಚಿಕೊಂಡಿದ್ದಾರೆ.
ಲಷ್ಕರ್-ಎ-ತೊಯ್ಬಾದಂತಹ ಭಯೋತ್ಪಾದಕ ಸಂಘಟನೆಗಳಿಗೆ ಆಶ್ರಯ ನೀಡುವಲ್ಲಿ ಪಾಕಿಸ್ತಾನದ ಭಾಗಿಯಾಗಿರುವ ಬಗ್ಗೆ ಅವರ ಹೇಳಿಕೆಗಳು ಸ್ಪಷ್ಟವಾಗಿ ಸೂಚಿಸುತ್ತವೆ.
ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯುಕೆ ವಿದೇಶಾಂಗ ಕಾರ್ಯದರ್ಶಿ ಡೇವಿಡ್ ಲ್ಯಾಮಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು "ಭಯಾನಕ" ಎಂದು ಕರೆದು, ಭಯೋತ್ಪಾದನೆಯನ್ನು ಎದುರಿಸಲು ಬ್ರಿಟಿಷ್ ಸರ್ಕಾರ ಭಾರತ ಮತ್ತು ಪಾಕಿಸ್ತಾನ ಎರಡರೊಂದಿಗೂ ಕೆಲಸ ಮಾಡುತ್ತಿದೆ ಎಂದು ಭರವಸೆ ನೀಡಿದ್ದಾರೆ.(ಏಜೆನ್ಸೀಸ್)