ಸುದ್ದಿಗೋಷ್ಠಿಯಲ್ಲಿ ಬಿಎಸ್‌ಪಿ ಜಿಲ್ಲಾಧ್ಯಕ್ಷ ಗಲ್ಲಿ ಸಂಗಪ್ಪ ಮಾತನಾಡಿದರು.  
ನ್ಯೂಸ್

ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಎಸ್‌ಪಿ ಸ್ಪರ್ಧೆ

ಶಿವಮೊಗ್ಗ: ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರದಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಬಿಎಸ್‌ಪಿಯ ನೂತನ ಜಿಲ್ಲಾಧ್ಯಕ್ಷ ಗಲ್ಲಿ ಸಂಗಪ್ಪ ತಿಳಿಸಿದರು.

ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶಿವಮೊಗ್ಗ ಜಿಲ್ಲೆಗೆ ನೂತನ ಪದಾಧಿಕಾರಿಗಳ ಘೋಷಣೆಯನ್ನು ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಮಾಡಿದ್ದಾರೆ. ಉಪಾಧ್ಯಕ್ಷರಾಗಿ ಶೇಖರ್ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಜಿ.ವೆಂಕಟೇಶ್, ಖಜಾಂಚಿಯಾಗಿ ಪುಲ್‌ರಾಜಂ, ಜಿಲ್ಲಾ ಕಾರ್ಯದರ್ಶಿಯಾಗಿ ಡಿ.ರವಿ ಹಾಗೂ ಐದು ಜನ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಬಹುಜನ ಸಮಾಜ ಪಾರ್ಟಿಯು ಕಾನ್ಶಿರಾಂ ಅವರ ಜೀವನದ ಕನಸು. ಅದನ್ನು ನನಸು ಮಾಡಲು ಮಾಯಾವತಿ ಶ್ರಮಿಸುತ್ತಿದ್ದಾರೆ. ಭಯೋತ್ಪಾದನೆ ತೊಲಗಲು, ಕೋಮುವಾದ ಕೊನೆಗಾಣಿಸಲು, ಭ್ರಷ್ಟಾಚಾರ ನಿರ್ಮೂಲನೆ ಮಾಡಲು, ಆಡಳಿತದಲ್ಲಿ ಸುಧಾರಣೆ ತರಲು, ಅಂಬೇಡ್ಕರ್ ಕನಸು ನನಸು ಮಾಡಲು ಬಹುಜನ ಸಮಾಜ ಪಾರ್ಟಿ ನಿರಂತರವಾಗಿ ಶ್ರಮಿಸುತ್ತಿದೆ ಎಂದರು.

ಶೇಖರ್ ನಾಯ್ಕ, ಎಂ.ಕೆ.ನಾಗಪ್ಪ, ಮಂಜಪ್ಪ, ಎನ್.ಎಚ್.ಪರಮೇಶ್ವರಪ್ಪ, ಗೋಪಾಲ್ ಸುದ್ದಿಗೋಷ್ಠಿಯಲ್ಲಿದ್ದರು.