ನ್ಯೂಸ್

ಬಿಎಸ್​ವೈ ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ: ಪುತ್ರ ಬಿವೈ ವಿಜಯೇಂದ್ರ ಟ್ವೀಟ್‌

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊತ್ತು, ಪೋಕ್ಸೋ ಕೇಸ್‌ನಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ರಿಲೀಫ್ ನೀಡಿದೆ. ಇಂದು ಬಿಎಸ್‌ವೈ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ ಸುದೀರ್ಘ ವಾಗದ ಪ್ರತಿವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠ, ಬಿಎಸ್‌ವೈಗೆ ಜಾಮೀನು ನೀಡಿದೆ.

ಮಾಜಿ ಸಿಎಂ ಯಡಿಯೂರಪ್ಪ ಅವರ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ವಿಜಯೇಂದ್ರ, ಬಿಎಸ್​ ಯಡಿಯೂರಪ್ಪ ಅವರ ಮೇಲಿನ ಕರುನಾಡ ಜನರ ಆಶೀರ್ವಾದ, ಕೋಟಿ ಹೃದಯಗಳ ಪ್ರಾರ್ಥನೆ ನ್ಯಾಯ ದೇಗುಲದಲ್ಲಿ ಅನಾವರಣಗೊಂಡಿದೆ. ಷಡ್ಯಂತ್ರ, ಪಿತೂರಿ ರಾಜಕಾರಣ ಯಡಿಯೂರಪ್ಪ ಅವರ ಹಿಂಬಾಲಿಸಿಕೊಂಡು ಬರುತ್ತಲೇ ಇದೆ, ಎದೆಗುಂದದ ಅವರು ನ್ಯಾಯದ ಹಾದಿಯಲ್ಲಿ ಷಡ್ಯಂತ್ರಗಳನ್ನು ಜಯಿಸಿದ್ದಾರೆ.

ಇಂದು ಉಚ್ಚ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಘನ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿ "ಯಡಿಯೂರಪ್ಪನವರು ವಿಚಾರಣೆಗಳಿಗೆ ಬೆನ್ನು ತೋರಿಸುವ ಜಾಯಮಾನದವರಲ್ಲ" ಎನ್ನುವ ಮಾತನ್ನು ಉಲ್ಲೇಖಿಸಿರುವುದು ಬಿ.ಎಸ್ ಯಡಿಯೂರಪ್ಪನವರು ಈ ನೆಲದ ಕಾನೂನಿಗೆ ಗೌರವ ಕೊಡುವ ಪರಿಯನ್ನು ಸಾಕ್ಷೀಕರಿಸಿದೆ. ಮುಂದಿನ ದಿನಗಳಲ್ಲಿ ನ್ಯಾಯ ದೇಗುಲದಲ್ಲಿ ಸತ್ಯವೇ ಗೆಲ್ಲುತ್ತದೆಂಬ ಅಚಲ ವಿಶ್ವಾಸ ನಮ್ಮದಾಗಿದೆ.