ನ್ಯೂಸ್

ಕಾಂಗ್ರೆಸ್​​ನವರಿಗೆ ಸೋಲಿನ ಸುಳಿವು ಸಿಕ್ಕಿದೆ‌…ಜನರೇ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ; ಬಿಸ್​ಎಸ್​ವೈ

ಶಿವಮೊಗ್ಗ: ವೀರಶೈವ ಸಮಾಜ ಒಡೆಯಲು ಯತ್ನಿಸಿದ್ದಕ್ಕೆ ಜನರು ಪಾಠ ಕಲಿಸಿದ್ದರು‌‌. ಕಾಂಗ್ರೆಸ್ ನವರಿಗೆ ಸೋಲಿನ ಸುಳಿವು ಸಿಕ್ಕಿದೆ‌ ಹೀಗಾಗಿ ಮನಬಂದಂತೆ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಲಿಂಗಾಯತರ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷುಲ್ಲಕವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್​ನವರಿಗೆ ಸೋಲಿನ ಸುಳಿವು ಸಿಕ್ಕಿದೆ‌ ಹೀಗಾಗಿ ಮನಬಂದಂತೆ ಮಾತನಾಡುತ್ತಾರೆ ಎಂದು ಕಾಂಗ್ರೆಸ್​​ ವಿರುದ್ಧವಾಗಿ ಕಿಡಿಕಾರಿದ್ದಾರೆ.

ಕಳೆದ ಚುನಾವಣೆಯಲ್ಲಿ ವೀರಶೈವ ಸಮಾಜ ಒಡೆಯಲು ಯತ್ನಿಸಿದ್ದಕ್ಕೆ ಜನರು ಪಾಠ ಕಲಿಸಿದ್ದರು‌‌. ಆದರೂ ಕಾಂಗ್ರೆಸ್ ನಾಯಕರಿಗೆ ಬುದ್ದಿ ಬಂದಿಲ್ಲ. ಈ ಬಾರಿಯೂ ಜನರು ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಪಾಠ ಕಲಿಸಲಿದ್ದಾರೆ. ರಾಹುಲ್ ಗಾಂಧಿಗೆ ವೀರಶೈವ ಧರ್ಮದ ಬಗ್ಗೆ ಏನೂ ಗೊತ್ತಿಲ್ಲ. ಸುಮ್ಮನೇ ಇಲ್ಲಿಗೆ ಬಂದು ಹೇಳಿಕೆ ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.