Building Collapse: ಮಹಾರಾಷ್ಟ್ರದ ಪಾಲ್ವಾರ್ ಜಿಲ್ಲೆಯ ವಿರಾರ್ ಪ್ರದೇಶದಲ್ಲಿ ಕಟ್ಟಡ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಗುರುವಾರ (ಆಗಸ್ಟ್ 28) ಘೋಷಿಸಿದ್ದಾರೆ. ಈ ಪ್ರದೇಶಗಳಲ್ಲಿ ಎನ್ಡಿಆರ್ಎಫ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಗೋಡೆ ಕೆಳಗೆ ಸಿಲುಕಿಕೊಂಡ ಇಬ್ಬರನ್ನು ರಕ್ಷಿಸಿದ್ದು, ಒಬ್ಬರು ಗಾಯಗೊಂಡಿದ್ದರೆ ಎಂದು ವರದಿ ಬಂದಿದೆ.
ಪಾಲ್ವರ್ ಜಿಲ್ಲೆಯ ವಿರಾರ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ರಮಾಬಾಯಿ ಅಪಾರ್ಟ್ಮೆಂಟ್ನ ಒಂದು ಭಾಗ ತಡರಾತ್ರಿ ಕುಸಿದು ಬಿದ್ದಿದ್ದು, ಈವರೆಗೂ 14 ಜನ ಸಾವನ್ನಪ್ಪಿರುವುದಾಗಿ ತಿಳಿದಿದೆ. ಇನ್ನು ಎನ್ಡಿಆರ್ಎಫ್ನ ಎರಡು ತಂಡಗಳು ಸ್ಥಳಕ್ಕೆ ಆಗಮಿಸಿದ್ದು, ಗೋಡೆಯ ಕೆಳಗೆ ಸಿಲುಕಿಕೊಂಡವರಿಗಾಗಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ರಂಜಾನ್ ಉಪವಾಸ ವೇಳೆ ಎನರ್ಜಿ ಡ್ರಿಂಕ್ ಸೇವನೆ… ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ಶಮಿ! Mohammed Shami
ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲಿಸರು ಸೇರಿದಂತೆ ತುರ್ತು ಸೇವೆಗಳು ಎನ್ಡಿಆರ್ಎಫ್ ತಂಡಗಳೊಂದಿಗೆ ಸಕ್ರಿಯವಾಗಿ ತೊಡಗಿಕೊಂಡಿದ್ದು, ಜನಸಂದಣಿಯನ್ನು ನಿಯಂತ್ರಿಸಲು ಬ್ಯಾರಿಕೇಡ್ಗಳನ್ನು ನಿರ್ಮಿಸಿದ್ದು, ಮುನ್ನಚ್ಚರಿಕೆ ಕ್ರಮವಾಗಿ ಕಟ್ಟಡದ ನಿವಾಸಿಗಳನ್ನು ಬೇರೆ ಕಡೆ ಸ್ಥಳಾಂತರಿಸಿದ್ದಾರೆ. (ಏಜೆನ್ಸೀಸ್)