ನ್ಯೂಸ್

ಸರ್ಕಾರಿ ನೌಕರರಿಗೆ ಬಂಪರ್​ ಗಿಫ್ಟ್​: ಶೇ.3 ರಷ್ಟು ತುಟ್ಟಿ ಭತ್ಯೆ ಏರಿಕೆ ಮಾಡಿದ ಕೇಂದ್ರ | Hikes

Hikes: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.3 ರಷ್ಟು ತುಟ್ಟಿ ಭತ್ಯೆಯನ್ನು (DA) ನೀಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಪರಿಷ್ಕೃತ ತುಟ್ಟಿ ಭತ್ಯೆ 2025 ಜುಲೈ 1 ರಿಂದ ಅನ್ವಯವಾಗುವಂತೆ ಅಕ್ಟೋಬರ್ 1, 2025  ಜಾರಿಗೆ ಬರಲಿದೆ. ಸುಮಾರು ಒಂದು ಕೋಟಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪರಿಹಾರ ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ.

ವರ್ಷಕ್ಕೆ ಎರಡು ಬಾರಿ ಡಿಎ ಪರಿಷ್ಕರಣೆಗಳನ್ನು ಲೆಕ್ಕಾಚಾರ ಮಾಡಲು ಆಧಾರವಾಗಿರುವ ಕೈಗಾರಿಕಾ ಕಾರ್ಮಿಕರ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ದತ್ತಾಂಶವನ್ನು ಆಧರಿಸಿದ ಶಿಫಾರಸುಗಳಿಗೆ ಅನುಗುಣವಾಗಿ ಈ ಹೆಚ್ಚಳವನ್ನು ಮಾಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ವಾರ್ಷಿಕ ಒಟ್ಟು 10,083.96 ಕೋಟಿ ರೂ.ಗಳ ಹೊರೆ ಬೀಳಲಿದೆ.(ಏಜೆನ್ಸೀಸ್​)