CM Nitish Kumar : ಬಿಹಾರ ಚುನಾವಣೆಗೂ ಮುನ್ನ, ಸಿಎಂ ನಿತೀಶ್ ಕುಮಾರ್ ಜನರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಆಗಸ್ಟ್ 1ರಿಂದ ರಾಜ್ಯಾದ್ಯಂತ 125 ಯೂನಿಟ್ವರೆಗೆ ಉಚಿತವಾಗಿ ವಿದ್ಯುತ್ (Free electricity up to 125 units) ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ಯೋಜನೆಯು ಸುಮಾರು 1.67 ಕೋಟಿ ಕುಟುಂಬಗಳಿಗೆ ಪ್ರಯೋಜನವನ್ನು ನೀಡಲಿದೆ.
ಈ ಬಗ್ಗೆ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್ 'ನಾವು ಮೊದಲಿನಿಂದಲೂ ಎಲ್ಲರಿಗೂ ಕೈಗೆಟುಕುವ ದರದಲ್ಲಿ ವಿದ್ಯುತ್ ಒದಗಿಸುತ್ತಿದ್ದೇವೆ. ಈಗ ನಾವು ಆಗಸ್ಟ್ 1 ರಿಂದ, ಅಂದರೆ ಜುಲೈ ಬಿಲ್ನಿಂದಲೇ, ಬಿಹಾರ ರಾಜ್ಯದ ಎಲ್ಲಾ ಗೃಹಬಳಕೆದಾರರು 125 ಯೂನಿಟ್ವರೆಗಿನ ವಿದ್ಯುತ್ಗೆ ಯಾವುದೇ ಹಣವನ್ನು ಪಾವತಿಸಬೇಕಿಲ್ಲ ಎಂದು ನಿರ್ಧರಿಸಿದ್ದೇವೆ. ಇದು ರಾಜ್ಯದ 1.67 ಕೋಟಿ ಕುಟುಂಬಗಳಿಗೆ ಪ್ರಯೋಜನವನ್ನು ನೀಡುತ್ತಾದೆ' ಎಂದು ಬರೆದುಕೊಂಡಿದ್ದಾರೆ.
ಅಲ್ಲದೇ, ಮುಂದಿನ 3 ವರ್ಷಗಳಲ್ಲಿ ಎಲ್ಲ ದೇಶಿಯ ಗ್ರಾಹಕರ ಒಪ್ಪಿಗೆಯೊಂದಿಗೆ ಸೌರ ವಿದ್ಯುತ್ ಸ್ಥಾವರ(Solar power plants) ಗಳನ್ನು ಜನರ ಮನೆಗಳ ಮೇಲ್ಛಾವಣಿ ಮೇಲೆ ಅಥವಾ ಹತ್ತಿರದ ಸಾರ್ವಜನಿಕ ಸ್ಥಳಗಳಲ್ಲಿ(public places) ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.
ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ಚುನಾವಣೆ(Bihar election) ಗೂ ಮುನ್ನ ಮತದಾರರನ್ನು ಸೆಳೆಯುವ ಯೋಜನೆಯನ್ನು ನಿತೀಶ್ ಕುಮಾರ್ ಘೋಷಿಸಿದ್ದಾರೆ. (ಏಜೆನ್ಸೀಸ್)