ನ್ಯೂಸ್

ಜಾರ್ಖಂಡ್ ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ಹಣ ಪತ್ತೆ!

ರಾಂಚಿ: ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ರಾಂಚಿಯ ಹಲವು ಸ್ಥಳಗಳಲ್ಲಿ ಸೋಮವಾರ(ಮೇ 6) ದಾಳಿ ನಡೆಸಿದ್ದು, ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ 20 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ.

2023 ರ ಫೆಬ್ರವರಿಯಲ್ಲಿ ಜಾರಿ ನಿರ್ದೇಶನಾಲಯ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಇಂಜಿನಿಯರ್ ವೀರೇಂದ್ರ ರಾಮ್ ಎಂಬಾತನನ್ನು ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಬಂಧಿಸಲಾಗಿತ್ತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆ ದಾಳಿ ಮಾಡಿದೆ. ಇನ್ನು ಇಡಿ ಅಂದಾಜಿಸಿರುವ ಪ್ರಕಾರ ಪತ್ತೆಯಾಗಿರುವ ಹಣ 25 ಕೋಟಿ ರೂ. ಗೂ ಅಧಿಕ ಮೊತ್ತವಾಗಿದೆ ಎಂದು ಇಡಿ ಹೇಳಿದೆ.