ನ್ಯೂಸ್

ಒಡಿಶಾ ರೈಲು ದುರಂತ; ಗಾಯಾಳುಗಳನ್ನು ಹೊತ್ತೊಯ್ಯುತ್ತಿದ್ದ​ ಬಸ್​ ಅಪಘಾತ

ಕೊಲ್ಕತ್ತ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ಬಳಿ ಮೂರು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್​ ಶನಿವಾರ ಅಪಘಾತಕ್ಕೀಡಾಗಿದೆ.

ಪಶ್ಚಿಮ ಬಂಗಾಳದ ಮೇದಿನಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಬಸ್​ ಹಾಗೂ ಪಿಕ್​ಅಪ್​ ವ್ಯಾನ್​ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಆಸ್ಪತ್ರೆಗೆ ದಾಖಲು

ಗಾಯಾಳುಗಳನ್ನು ಹೊತ್ತೊಯ್ಯುತ್ತಿದ್ದ ಬಸ್​ ಹಾಗೂ ಪಿಕ್​ಅಪ್​ ವ್ಯಾನ್ ನಡುವೆ ಅಪಘಾತ ಸಂಭವಿಸಿದ ಕಾರಣ ಮೇದಿನಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.

ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಸಂಚಾರ ದಟ್ಟಣೆ ನಿವಾರಿಸಿ ಗಾಯಾಳುಗಳನ್ನು ಪಶ್ಚಿಮ ಬಂಗಾಳದಲ್ಲಿರುವ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.