ನ್ಯೂಸ್

ಬಸ್ ಸ್ಟೇರಿಂಗ್ ಕಟ್; ತಪ್ಪಿದ ಅನಾಹುತ

Shivamogga

ಶಿವಮೊಗ್ಗ: ತಾಲೂಕಿನ ಹೊಳಲೂರಿನಲ್ಲಿ ಗುರುವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್‌ನ ಸ್ಟೇರಿಂಗ್ ತುಂಡಾಗಿ ರಸ್ತೆ ಬದಿಯ ಚರಂಡಿಗೆ ನುಗ್ಗಿದ್ದು ಭಾರೀ ಅನಾಹುತವೊಂದು ತಪ್ಪಿದೆ.

ದಾವಣಗೆರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬಸ್, ಹೊಳಲೂರಿನಲ್ಲಿ ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ತೆರಳುವಾಗ ಸ್ಟೇರಿಂಗ್ ತುಂಡಾಗಿ ಚಾಲಕನ ನಿಯಂತ್ರಣ ಕಳೆದುಕೊಂಡು ನೇರವಾಗಿ ಚರಂಡಿಗೆ ನುಗ್ಗಿದೆ. ಪಕ್ಕದಲ್ಲೇ ವಿದ್ಯುತ್ ಕಂಬವಿದ್ದು ಅಪಾಯ ಸ್ವಲ್ವದರಲ್ಲೇ ತಪ್ಪಿದೆ. ಪ್ರಯಾಣಿಕರು ಸುರಕ್ಷಿತವಾಗಿದ್ದು ಬೇರೊಂದು ಬಸ್ ಮೂಲಕ ಶಿವಮೊಗ್ಗಕ್ಕೆ ಕಳುಹಿಸಿಕೊಡಲಾಯಿತು.