ನ್ಯೂಸ್

ವಿಧಾನಪರಿಷತ್ ಉಪ ಚುನಾವಣೆಗೆ ದಿನಾಂಕ ಘೋಷಣೆ; ಇಲ್ಲಿದೆ ಪೂರ್ತಿ ವಿವರ..

Webdesk - Ravikanth

ಬೆಂಗಳೂರು: ಕರ್ನಾಟಕ ವಿಧಾನಪರಿಷತ್​ನ ಮೂವರು ಸದಸ್ಯರ ರಾಜೀನಾಮೆಯಿಂದ ತೆರವುಗೊಂಡಿರುವ ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಘೋಷಿಸಿದೆ.

ವಿಧಾನಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರ್, ಆರ್. ಶಂಕರ್ ಹಾಗೂ ಲಕ್ಷಣ ಸವದಿ ಅವರು ರಾಜೀನಾಮೆ ನೀಡಿದ್ದರಿಂದ ತೆರವಾಗಿರುವ ಸ್ಥಾನಗಳನ್ನು ಭರ್ತಿಗೊಳಿಸುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯಲಿದೆ.

ಜೂನ್​ 30ರಂದು ಈ ಉಪ ಚುನಾವಣೆ ನಡೆಯಲಿದ್ದು, ಜೂ. 13ರಂದು ಅಧಿಸೂಚನೆ ಹೊರಡಲಿದೆ. ನಾಮಪತ್ರ ಸಲ್ಲಿಸಲು ಜೂ. 20 ಕಡೇ ದಿನಾಂಕ. ಜೂ. 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜೂ. 23 ಕೊನೆಯ ದಿನವಾಗಿರುತ್ತದೆ. ಜೂ. 30ರ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಚುನಾವಣೆ ನಡೆಯಲಿದ್ದು, ಅದೇ ದಿನ ಸಂಜೆ ಐದಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.