ಬೆಂಗಳೂರು: ಸೆಂಟರ್ ಫಾರ್ ಡೆವಲಪ್ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ (ಸಿ-ಡಾಟ್)ನಲ್ಲಿ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿದ್ದು, ಇವುಗಳಿಗೆ ನೇಮಕಾತಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದು, ಇಂಜಿನಿಯರಿಂಗ್ ಪದವಿ ಪಡೆದ ಆಸಕ್ತ ಅಭ್ಯರ್ಥಿಗಳು ಇಲ್ಲಿ ನೀಡಲಾದ ಮಾಹಿತಿಗಳ ಅನ್ವಯ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಮಾಹಿತಿ
ಅಧಿಸೂಚನೆಯಲ್ಲಿ ತಿಳಿಸಿದ ಮಾಹಿತಿ ಪ್ರಕಾರ ಒಟ್ಟು 200 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಹೀಗೆ ಅರ್ಜಿ ಸಲ್ಲಿಸಿ
ಸಿ-ಡಾಟ್‌ಗೆ ಸಂಬಂಧಿಸಿದ ಪೋರ್ಟಲ್‌ನಲ್ಲಿ ಮೊದಲು ನೋಂದಣಿ ಪೂರ್ಣಗೊಳಿಸಬೇಕು. ಬಳಿಕ ಮೂಲ ವಿವರಗಳ ಮೂಲಕ ಅರ್ಜಿ ಭರ್ತಿ ಮಾಡಿ, ಮೂಲದಾಖಲೆಗಳ ಜತೆ ಅದೇ ವೆಬ್‌ಸೈಟ್‌ನಲ್ಲಿ ಅರ್ಜಿ ಕಳುಹಿಸಬೇಕು.
ಅರ್ಹತೆಗಳು
ಶೈಕ್ಷಣಿಕ : ಕಂಪ್ಯೂಟರ್ ಸೈನ್ಸ್ ಆ್ಯಂಡ್ ಇಂಜಿನಿಯರಿಂಗ್‌ನಲ್ಲಿ ಬಿ.ಇ/ಬಿ.ಟೆಕ್, ಇಂಜಿನಿಯರಿಂಗ್‌ಗೆ ಸಂಬಂಧಿಸಿದ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.
ಅನುಭವ: ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಹೊಸ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದಾಗಿದ್ದು, 3 ವರ್ಷ ಅನುಭವ ಹೊಂದಿರುವ ಅಭ್ಯರ್ಥಿಗೆ ಮೊದಲ ಆದ್ಯತೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಗರಿಷ್ಠ 30 ವರ್ಷ ಅಥವಾ ಅದರೊಳಗಿರಬೇಕು.
ಅಭ್ಯರ್ಥಿಯ ಆಯ್ಕೆ
ಗೇಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳಿಗೆ ಪ್ರಾಮುಖ್ಯತೆ ನೀಡಲಾಗಿದ್ದು, ಜತೆಗೆ ಸಂದರ್ಶನ ನಡೆಸಿ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿಯ ಜತೆಗೆ ಗುರುತಿನ ಪುರಾವೆ, ವಿದ್ಯಾರ್ಹತೆಗೆ ಸಂಬಂಧಿಸಿದ ದಾಖಲೆಗಳ ನಕಲು ಪ್ರತಿಗಳನ್ನು ಸಲ್ಲಿಸಬೇಕಿದ್ದು, ಇವುಗಳನ್ನೂ ಪರಿಶೀಲಿಸಲಾಗುತ್ತದೆ.
ವೇತನ ಶ್ರೇಣಿ
ಸಿ-ಡಾಟ್ ಸಂಸ್ಥೆಗೆ ಆಯ್ಕೆಯಾದ ಅಭ್ಯರ್ಥಿಗೆ ಸಂಸ್ಥೆಯು ಪ್ರತಿ ತಿಂಗಳೂ 1,00,000 ವೇತನ ನೀಡಲಿದೆ.
ಹೆಚ್ಚಿನ ಮಾಹಿತಿಗಾಗಿ: cdotrecruitment.cdot.in
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: 29.11.2023