ಚಿಕ್ಕಬಳ್ಳಾಪುರ: ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆಯನ್ನಾಗಿ ಮಾಡುವ ಕುರಿತು ಪ್ರಸ್ತಾವನೆ ಪ್ರಸ್ತಾಪಿಸಲಾಯಿತು. ಈ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆಯನ್ನು ಮರುನಾಮಕರಣ ಮಾಡಿ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಸರ್ಕಾರ ವಿರೋಧದ ನಡುವೆಯೂ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡಲಾಯ್ತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರು ಬದಲಾಯಿಸುವ ಸಂಬಂಧ ಇಂದಿನ ಸಚಿವ ಸಂಪುಟದಲ್ಲಿ ಚರ್ಚೆ ನಡೆದಿದ್ದು, ಅಂತಿಮವಾಗಿ ಹೆಸರು ಬದಲಾವಣೆಗೆ ಒಪ್ಪಿಗೆ ಸೂಚಿಸಿದೆ.
ಅದರಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಹೆಸರು ಬದಲಾವಣೆಗೆ ಕೂಡ ಅನುಮೋದನೆ ಸಿಕ್ಕಿದೆ. ಬಾಗೇಪಲ್ಲಿಯ ಹೆಸರನ್ನು ಭಾಗ್ಯನಗರ ಎಂದು ಮರುನಾಮಕರಣ ಮಾಡಲಾಗಿದೆ.
ಇದನ್ನೂ ಓದಿ: ಮಧ್ಯಮ ವರ್ಗದವರ ಹೊರೆ ಕಡಿಮೆ ಮಾಡಲು ಸರ್ಕಾರ ಚಿಂತನೆ; ಶೇ.12 ರಷ್ಟು ಜಿಎಸ್ಟಿ ಸ್ಲ್ಯಾಬ್ ರದ್ದುಗೊಳಿಸುವ ಸಾಧ್ಯತೆ| gst
(ಏಜೆನ್ಸೀಸ್)
ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಬಾಗೇಪಲ್ಲಿಯ ಹೆಸರನ್ನೂ ಬದಲಾಯಿಸಲು ಸ್ಥಳೀಯ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಅದರಂತೆ ಬಾಗೇಪಲ್ಲಿಯ ಹೆಸರು ’ಭಾಗ್ಯನಗರ’ ಎಂದು ಬದಲಾವಣೆ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದ್ದರು. ಇದೀಗ ಈ ಪ್ರಸ್ತಾವನೆಗೂ ಸಹ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಬಾಗೇಪಲ್ಲಿ ಇನ್ಮುಂದೆ ’ಭಾಗ್ಯನಗರ’ ಎಂದು ಬದಲಿಸಲಾಗಿದೆ.