ನ್ಯೂಸ್

ಶೇ.15 ರಷ್ಟು ಟಿಕೆಟ್​ ದರ ಹೆಚ್ಚಳ ಸೇರಿದಂತೆ ವಿವಿಧ ಪ್ರಮುಖ ಅಂಶಗಳಿಗೆ ಸಚಿವ ಸಂಪುಟ ಅನುಮೋದನೆ | Cabinet

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಪ್ರಯಾಣದರ ಶೇ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಸಚಿವ ಸಂಪುಟ(Cabinet) ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ದರವು ಜನವರಿ 5 ರಿಂದ ಜಾರಿಗೆ ಬರಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಗುರುವಾರ ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ತಿಳಿಸಿದರು.

ಪ್ರತಿ ಲೀಟರ್ ಡೀಸೆಸ್​ಗೆ 10-1-2015ರಲ್ಲಿ ಬಿಎಂಟಿಸಿ ಗೆ ಹತ್ತು ವರ್ಷಗಳ ಹಿಂದೆ ದರ ಪರಿಷ್ಕರಣೆ ಆಗಿತ್ತು. ಅಂದು ರೂ60.98 ಪೈಸೆ ಇತ್ತು. ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಅಂದಿನ ಡೀಸೆಲ್ ವೆಚ್ಚ 9 ಕೋಟಿ 16ಲಕ್ಷ ಇದ್ದ್ದು ಈಗ ಪ್ರಸ್ತುತ 13.21ಕೋಟಿ ಹೆಚ್ಚಳ ಆಗಿದೆ. ರಾಜ್ಯದ ನಾಲ್ಕು ಸಾರಿಗೆ ನಿಗಮಗಳಿಂದ ಸಿಬ್ಬಂದಿ ವೆಚ್ಚ 12.85ಕೋಟಿ ಇದ್ದದ್ದು ಪ್ರಸ್ತುತ 18.36 ಕೋಟಿ ಆಗಿದೆ ಪ್ರತಿ ದಿನ 9.56ಕೋಟಿ ಹೆಚ್ಚುವರಿ ಹೊರೆ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ದರ ಪರಿಷ್ಕರಣೆ ಆಗಿದೆ ಎಂದಿದ್ದಾರೆ.

1.ದೀರ್ಘಾವಧಿ ಸಾಲ 137.85 ಕೋಟಿಗಳ ಅನುದಾನವನ್ನು ವಿನಿಯೋಗಿಸಲು ಅನುಮೋದನೆ

ಭಾರತ ಸರ್ಕಾರದ ಆರ್ಥಿಕ ಸಚಿವಾಲಯವು ವಿಶೇಷ ಬಂಡವಾಳ ನೆರವಿನ ಯೋಜನೆಯ ಭಾಗ 7 (ಎ) ಅಡಿ ಕರ್ನಾಟಕದ ರಾಜ್ಯಕ್ಕೆ ಬಂಡವಾಳ ವೆಚ್ಚಕ್ಕಾಗಿ ದೀರ್ಘಾವಧಿ ಸಾಲದ ರೂಪದಲ್ಲಿ ನೀಡಿರುವ 137.85 ಕೋಟಿಗಳ ಅನುದಾನವನ್ನು ವಿನಿಯೋಗಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಜನಕಲ್ಯಾಣದ ಜೊತೆಗೆ ಅಭಿವೃದ್ದಿ ಗಮನದಲ್ಲಿದೆ ಹಾಗೂ ಹೊರೆಯನ್ನು ಸರಿದೂಗಿಸುವ ವ್ಯವಹಾರಿಕತೆಯ ಹಿನ್ನೆಲೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

2.ಧಾರವಾಡ ಮಹಾನಗರ ಪಾಲಿಕೆ ರಚನೆಗೆ ಒಪ್ಪಿಗೆ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಹುಬ್ಬಳ್ಳಿ ಮತ್ತು ಧಾರವಾಡ ಮಹಾನಗರ ಪಾಲಿಕೆಯನ್ನು ರಚಿಸಲು ಸಚಿವ ಸಂಪುಟ ನಿರ್ಧರಿಸಿದೆ.

3.ಬಂದರು ನಿರ್ಮಾಣಕ್ಕೆ ಅನುಮೋದನೆ

ಕೇಂದ್ರ ಪುರಸ್ಕೃತ ಯೋಜನೆಯಡಿ ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿಯಲ್ಲಿನ ಮೀನುಗಾರಿಕೆ ಬಂದರು ನಿರ್ಮಾಣ ಕಾಮಗಾರಿಯ 209.13 ಕೋಟಿ ರೂ.ಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.ಕೇಂದ್ರ ಪುರಸ್ಕೃತ ಯೋಜನೆಯಡಿ ಹಾಲಿ ಇರುವ ಮೀನುಗಾರಿಕೆ ಬಂದರುಗಳ ಆಧುನೀಕರಣ ಹಾಗೂಮೀನುಗಾರಿಕೆ ಬಂದರು ಮತ್ತು ಇಳಿದಾಣ ಕೇಂದ್ರಗಳಲ್ಲಿ ನಿರ್ವಹಣಾ ಹೂಳೆತ್ತುವಿಕೆ ಯ ಕಾಮಗಾರಿಗಳ 84.57 ಕೋಟಿ ರೂ.ಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

4.ಕೆಐಡಿಬಿ ಸಾಲದ ಮಿತಿ 5000 ಕೋಟಿ ರೂ. ಹೆಚ್ಚಳ

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಹಣಕಾಸು ಸಂಸ್ಥೆಗಳಿಂದ ಪಡೆಯುವ ಸಾಲದ ಮಿತಿ ಪ್ರಸ್ತುತ ರೂ. 500 ಕೋಟಿ ಗಳಿದ್ದು, ಅದನ್ನು ರೂ. 5000 ಕೋಟಿಗಳಿಗೆ ಹೆಚ್ಚಿಸಲು ಅನುಮೋದನೆ ನೀಡಲಾಗಿದೆ.

5.ಚಿಂತಾಮಣಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕಾಮಗಾರಿ

ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲ್ಲೂಕಿನ ವಡಗನಹಳ್ಳಿ ಗ್ರಾಮದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜಿನ ಕಟ್ಟಡ ಕಾಮಗಾರಿಗಳನ್ನು 149.75 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

6.ವಿದ್ಯಾರ್ಥಿ ನಿಲಯಕ್ಕೆ ರಿಯಾಯಿತಿ ದರಲ್ಲಿ ನಿವೇಶನ

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಾಯಕ ವಿದ್ಯಾರ್ಥಿ ನಿಲಯ, ದಾವಣಗೆರೆ ಇವರಿಗೆ 30 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ 523.99 ಚ.ಮೀ ವಿಸ್ತೀರ್ಣದ ನಾಗರಿಕ ಸೌಲಭ್ಯ ನಿವೇಶವನ್ನು ರಿಯಾಯಿತಿ ದರದಲ್ಲಿ ಮಂಜೂರು ಮಾಡಲಾಗಿದೆ.