ನವದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗೊಂಡ ಭಾರತೀಯ ಸೇನಾಪಡೆಯ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ನಿಧನರಾಗಿದ್ದಾರೆ. ಈ ಆಘಾತಕಾರಿ ಘಟನೆಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳಿಗೆ ಸಂಬಂಧಿಸಿದ ಕೇಂದ್ರ ಸಂಪುಟ ಸಮಿತಿಯು ನವದೆಹಲಿಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ.
ಭಾರತದ ಭದ್ರತಾ ಪಡೆಗಳ ಉನ್ನತ ಮಟ್ಟದ ನೇಮಕಾತಿಗಳ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸರ್ಕಾರದ ಕ್ಯಾಬಿನೆಟ್ ಕಮಿಟಿ ಆನ್ ಸೆಕ್ಯುರಿಟಿ(ಸಿಸಿಎಸ್)ಯ ಸಭೆಯು ಇಂದು ಸಂಜೆ 6.30ರಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಇದನ್ನೂ ಓದಿ: ಹೆಲಿಕಾಪ್ಟರ್ ಪತನ: ಫಲಿಸಲಿಲ್ಲ ಭಾರತೀಯರ ಪ್ರಾರ್ಥನೆ, ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್ ರಾವತ್ ವಿಧಿವಶ
ಜನರಲ್ ರಾವತ್ರಂಥ ಸಮರ್ಥ ನಾಯಕರನ್ನು ಕಳೆದುಕೊಂಡ ನೋವಿನ ಸಂದರ್ಭದಲ್ಲೇ ಭಾರತೀಯ ಸೇನೆಗೆ ತಕ್ಷಣವೇ ಮತ್ತೊಬ್ಬ ಯೋಗ್ಯ ಅಧಿಕಾರಿಯನ್ನು ಸೇನಾ ಮುಖ್ಯಸ್ಥರಾಗಿ ನೇಮಿಸುವ ಸವಾಲು ಕೇಂದ್ರ ಸರ್ಕಾರದ ಮುಂದಿದೆ. ಈ ಹಿನ್ನೆಲೆಯಲ್ಲಿ ಈ ಸಂಪುಟ ಸಮಿತಿ ಸಭೆ ಮಹತ್ವ ಪಡೆದುಕೊಂಡಿದೆ. (ಏಜೆನ್ಸೀಸ್)