ಬೆಂಗಳೂರು: ಸಂಪುಟ ವಿಸ್ತರಣೆಯ ನಿರೀಕ್ಷೆಯೊಂದಿಗೆ ಸಚಿವ ಸ್ಥಾನ ಆಸೆ ಇಟ್ಟುಕೊಂಡಿದ್ದ ಸಚಿವಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಘಾತ ನೀಡಿದ್ದಾರೆ.
ಚಿತ್ರದುರ್ಗಕ್ಕೆ ಹೊರಡುವ ಮುನ್ನ ಸಂಪುಟ ವಿಸ್ತರಣೆ ವಿಳಂಬ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಯೋಣ, ನಾವು-ನೀವು ಇಬ್ಬರೂ ಕಾಯಲೇಬೇಕು ಎಂದು ಹೇಳು ಮೂಲಕ ಸಂಪುಟ ವಿಸ್ತರಣೆಗೆ ಇನ್ನು ಕಾಲ ಕೂಡಿ ಬಂದಿಲ್ಲ ಎಂದು ಸಂದೇಶ ರವಾನಿಸಿದ್ದಾರೆ.
ಇದಕ್ಕೂ ಮುನ್ನ ಕಾವೇರಿ ನಿವಾಸದಿಂದ ಹೊರಟ ಸಿಎಂ ಬಿಎಸ್ವೈ ಎಚ್ ಎ ಎಲ್ ಮೂಲಕ ಚಿತ್ರದುರ್ಗಕ್ಕೆ ಪ್ರಯಾಣ ಬೆಳೆಸಿದ್ದಾರೆ. ಚಿತ್ರದುರ್ಗ ಮತ್ತು ಶಿವಮೊಗ್ಗಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದಾರೆ. (ದಿಗ್ವಿಜಯ ನ್ಯೂಸ್)