Teacher teaching students in the classroom scene illustration 
ನ್ಯೂಸ್

ರಾಜ್ಯಮಟ್ಟದ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಅರ್ಹತೆಗಳೇನು?

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2025-26ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ?ಶಿಕ್ಷಕ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಶಿಕ್ಷಕರು ಆನ್‌ಲೈನ್ ಮೂಲಕ ಆ.10ರೊಳಗೆ ಅರ್ಜಿ ಸಲ್ಲಿಸಬಹುದು.

ಬೋಧನಾ ಚಟುವಟಿಕೆಗಳ ಮೂಲಕ ಕಲಿಕೆಯನ್ನುಂಟು ಮಾಡುವ ಬಹುಮುಖ ವ್ಯಕ್ತಿತ್ವದ ಶಿಕ್ಷಕ, ಉಪನ್ಯಾಸಕರ, ಮುಖ್ಯ ಶಿಕ್ಷಕ ಮತ್ತು ಪ್ರಾಂಶುಪಾಲರನ್ನು ಗುರುತಿಸಿ ಸೆ.5ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಇಲಾಖೆಯ ಆನ್‌ಲೈನ್ ಪೋರ್ಟಲ್ ಠಿಠಿ://ಠ್ಚಟಟ್ಝಛಿಛ್ಠ್ಚಠಿಜಿಟ್ಞ.ಚ್ಟ್ಞಠಿ.ಜಟ.ಜ್ಞಿ ನಲ್ಲಿ ಅರ್ಜಿ ಸಲ್ಲಿಸಬಹುದು. ನಂತರ ತಾಲೂಕು, ಜಿಲ್ಲಾ ಮಟ್ಟದ ಆಯ್ಕೆ ಸಮಿತಿಗಳ ಶಿಾರಸು ಪ್ರಕ್ರಿಎಯ ಹಾಗೂ ರಾಜ್ಯ ಮಟ್ಟದ ಆಯ್ಕೆ ಸಮಿತಿ ಕೈಗೊಳ್ಳುವ ಅಂತಿಮ ಆಯ್ಕೆಪಟ್ಟಿಯವರೆಗಿನ ಎಲ್ಲ ಹಂತಗಳ ವೇಳಾಪಟ್ಟಿ ಪ್ರಕಟಿಸಲಾಗಿದೆ. ಆ ಪ್ರಕಾರ ಪ್ರಕ್ರಿಯೆ ಕೈಗೊಳ್ಳುವಂತೆ ಬಿಇಒ ಹಾಗೂ ಡಿಡಿಪಿಐಗಳಿಗೆ ಸೂಚಿಸಲಾಗಿದೆ.

ಅರ್ಜಿ ಸಲ್ಲಿಸುವ ಶಿಕ್ಷಕರಿಗೆ ಅರ್ಹತೆ:

- ಇಲಾಖೆಯಲ್ಲಿ ಒಟ್ಟು 10 ವರ್ಷದ ಸೇವೆ ಸಲ್ಲಿಸಿರಬೇಕು. ಕಳೆದ ಐದು ವರ್ಷಗಳಿಂದ ಶಾಲೆಯಲ್ಲಿ ಬೋಧನೆ ಮಾಡುತ್ತಿರುವ ಶಿಕ್ಷಕರು ಅರ್ಹರಾಗಿರುತ್ತಾರೆ

- ಕೊರೊನಾ ಅವಧಿಯಲ್ಲಿ ಶೈಕ್ಷಣಿಕ ವರ್ಷಗಳಲ್ಲಿ ಸರ್ಕಾರ ಮತ್ತು ಇಲಾಖೆ ನಿಗದಿಪಡಿಸಿದ್ದ ಪರ್ಯಾಯ ಮಾರ್ಗಗಳ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲು ಕಾರ್ಯಪ್ರವೃತ್ತರಾಗಿರಬೇಕು.

- ಯಾವುದೇ ಗಂಭಿರ ಆರೋಪ,. ಶಿಸ್ತು ಪ್ರಕರಣ, ಕ್ರಿಮಿನಲ್ ಪ್ರಕರಣ, ಇಲಾಖೆ ವಿಚಾರಣೆ ಮತ್ತು ಸೇವಾ ವಿಷಯಗಳಿಗೆ ಸಂಬಂಧಿಸಿದ ನ್ಯಾಯಾಲಯ ಪ್ರಕರಣಗಳನ್ನು ಎದುರಿಸುತ್ತಿರುವವರು ಅರ್ಹರಾಗಿರುವುದಿಲ್ಲ