ಬೆಂಗಳೂರು: ಬಾಹ್ಯಾಕಾಶ ವಿಜ್ಞಾನಿ ಕಸ್ತೂರಿ ರಂಗನ್ ನೇತೃತ್ವದ ಐಐಟಿ, ಐಐಎಂ ಪ್ರೊೆಸರ್‌ಗಳನ್ನೊಳಗೊಂಡ 12 ತಜ್ಞರ ನೇತೃತ್ವದಲ್ಲಿ ರೂಪಗೊಂಡ ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರದಲ್ಲಿ ಹೊಸ ಸರ್ಕಾರ ತನ್ನ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಲಾಗುವುದು ಎಂದು ಪ್ರಕಟಿಸಿದರು.
ರಾಷ್ಟ್ರೀಯ ಶಿಕ್ಷಣ ನೀತಿಗೆ ಏಕ ಕಾಲದಲ್ಲಿ ವಿದ್ಯಾರ್ಥಿಗಳು, ಪೋಷಕರು ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವಿರೋಧವಿದೆ. ಬಿಜೆಪಿ ದೇಶದಲ್ಲಿ ಎಲೂ ಎನ್‌ಇಪಿ ಜಾರಿಗೊಳಿಸದೆ ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೊಳಿಸಿ ನಾಡಿನ ವಿದ್ಯಾರ್ಥಿ ಸಮೂಹದ ಹಿತಾಸಕ್ತಿಯನ್ನು ಬಲಿಕೊಟ್ಟಿದೆ ಎಂದರು.
ಅಗತ್ಯವಾದ ಕೆಲವೊಂದು ಸಿದ್ಧತೆಗಳನ್ನು ಮಾಡಿಕೊಂಡು ಎನ್‌ಇಪಿ ರದ್ದುಗೊಳಿಸಬೇಕಿದೆ. ಈ ವರ್ಷ ಅದಕ್ಕೆ ಸಮಯ ಇರಲಿಲ್ಲ. ಚುನಾವಣೆ ಚುನಾವಣೆ ಫಲಿತಾಂಶ ಬಂದು ಸರ್ಕಾರ ರಚನೆ ಆಗುವ ವೇಳೆಗೆ ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಮಧ್ಯದಲ್ಲಿ ಸಮಸ್ಯೆ ಆಗಬಾರದು ಎನ್ನುವ ಕಾರಣದಿಂದ ಈ ವರ್ಷ ಹಾಗೆಯೇ ಮುಂದುವರೆದಿದೆ ಎಂದು ಸ್ಪಷ್ಟಪಡಿಸಿದರು.