ಚಿಕ್ಕಮಗಳೂರು: ಅಜ್ಜಂಪುರದ ಮಾಕನಹಳ್ಳಿಯಲ್ಲಿ ಚಾಲಕನ ನಿಯಂತ್ರಣತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದ್ದು, ಮೆಸ್ಕಾಂನ ಜೆಇ ಸೇರಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಕಿರಣ್(32) ಹಾಗೂ ಅಜ್ಜಂಪುರ ತಾಲೂಕಿನ ಶಿವನಿ ಮೂಲದ ನಾಗರಾಜ್ (40) ಮೃತ ದುರ್ದೈವಿಗಳು. ಕಿರಣ್ ಶಿವನಿ ಮೆಸ್ಕಾಂನಲ್ಲಿ ಜೆಇ ಆಗಿ ಕೆಲಸ ಮಾಡುತ್ತಿದ್ದರು. ಫೆ.8ರಂದು ಕಿರಣ್ಗೆ ಮದುವೆ ನಿಗದಿಯಾಗಿತ್ತು. ಎಲ್ಲವೂ ಚೆನ್ನಾಗಿದ್ದರೆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿದ್ದು. ಆದರೆ ಇವರ ಬಾಳಲ್ಲಿ ವಿಧಿ ಆಟವಾಡಿಬಿಟ್ಟಿದೆ. ಮದುವೆ ಸಂಭ್ರಮದಲ್ಲಿ ಇದ್ದ ಮನೆಯಲ್ಲೀಗ ಸೂತಕ ಛಾಯೆ ಆವರಿಸಿದೆ.