ನ್ಯೂಸ್

ಟ್ರಕ್‌ಗೆ ಕಾರು ಡಿಕ್ಕಿ; ಇಬ್ಬರು ಮಕ್ಕಳು ಸೇರಿದಂತೆ 7 ಮಂದಿ ದುರ್ಮರಣ!

ತಮಿಳುನಾಡು: ಬೆಳ್ಳಂಬೆಳಗ್ಗೆ ಟ್ರಕ್​ ಮತ್ತು ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಏಳು ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ಭಾನುವಾರ (ಅ.15) ವರದಿಯಾಗಿದೆ.

ತಿರುವಣ್ಣಾಮಲೈನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಬೆಂಗಳೂರಿಗೆ ಹಿಂತಿರುಗುತ್ತಿದ್ದ ಕರ್ನಾಟಕ ಮೂಲದ ಎಂಟು ಜನರನ್ನು ಒಳಗೊಂಡಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರು ಟ್ರಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಪ್ರಸ್ತುತ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ವಾಹನವನ್ನು ಬೇರ್ಪಡಿಸಿದ ನಂತರ ಮೃತ ದೇಹಗಳನ್ನು ಹೊರತೆಗೆಯಲಾಯಿತು. ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಚಾಲಕನ ಪತ್ತೆಗೆ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ, (ಏಜೆನ್ಸೀಸ್).