ಉತ್ತರಪ್ರದೇಶ: ವೇಗವಾಗಿ ಚಲಿಸುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಬಸ್ತಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 28ರಲ್ಲಿ ನಡೆದಿದೆ.
ಏಳು ಮಂದಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಅಪಘಾತದ ಭೀಕರತೆಗೆ ಸ್ಥಳದಲ್ಲೇ 5 ಜನ ಸಾವನ್ನಪ್ಪಿದ್ದಾರೆ. ಕಾರಿನ ಚಾಲಕ ಮತ್ತು ಓರ್ವ ಬಾಲಕಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಬೆಳಗಿನ ಜಾವ ಅಪಘಾತ ಸಂಭವಿಸಿದ್ದು, ಅತಿ ವೇಗದಲ್ಲಿದ್ದ ಕಾರು ಮುಂದೆ ಸಾಗುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. (ಏಜೆನ್ಸೀಸ್)