ನ್ಯೂಸ್

ಕಾಲುವೆಗೆ ಕಾರು ಬಿದ್ದು ಒಂದೇ ಕುಟುಂಬದ ಎಂಟು ಮಂದಿ ಸಾವು..Car Accident

ಹರಿಯಾಣ: ಕೈತಾಲ್ ಜಿಲ್ಲೆಯಲ್ಲಿ ಕಾರೊಂದು ನಿಯಂತ್ರಣ ( Car Accident ) ತಪ್ಪಿ ಕಾಲುವೆಗೆ ಬಿದ್ದ ಪರಿಣಾಮ ಭಾರೀ ಅವಘಡ ಸಂಭವಿಸಿದೆ. ಈ ಅವಘಡದಲ್ಲಿ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿದ್ದಾರೆ.

ಮೂವರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.

ಕುಟುಂಬಸ್ಥರು ಬಾಬಾ ಲಾಡನ ಜಾತ್ರೆಗೆ ತೆರಳುತ್ತಿದ್ದ ವೇಳೆ ಮುಂಡ್ರಿ ಬಳಿ ಕಾಲುವೆಗೆ ಕಾರು ಬಿದ್ದು ದಾರುಣ ಘಟನೆ ನಡೆದಿದೆ. ಕಾರಿನ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ಷಣಾ ತಂಡದೊಂದಿಗೆ ನಾಲೆಯಿಂದ ಮೃತ ದೇಹಗಳನ್ನು ಹೊರ ತೆಗೆಯುವ ಕಾರ್ಯ ನಡೆಯುತ್ತಿದೆ. ಇಲ್ಲಿಯವರೆಗೆ 8 ಮೃತದೇಹಗಳು ಪತ್ತೆಯಾಗಿದ್ದು, ಒಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಅಪಘಾತಕ್ಕೆ ಕಾರಣವೇನೆಂಬುದನ್ನು ಪರಿಶೀಲಿಸಲಾಗುವುದು ಮತ್ತು ಕಾರಿಗೆ ತಾಂತ್ರಿಕ ದೋಷವಿದೆಯೇ ಅಥವಾ ಚಾಲಕನ ತಪ್ಪೇ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

.

ಈ ಅವಘಡದಿಂದಾಗಿ ಇಡೀ ಪ್ರದೇಶ ದುಃಖದ ಛಾಯೆ ಆವರಿಸಿತ್ತು. ಮೃತರ ಸಂಬಂಧಿಕರಿಗೆ ಮಾಹಿತಿ ನೀಡಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ಸಂಪೂರ್ಣ ಮಾಹಿತಿ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.