ರಾಜಸ್ಥಾನ: ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕರ್ತವ್ಯದಲ್ಲಿದ್ದ ಐವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಜಸ್ಥಾನದ ಚುರುನಲ್ಲಿ ವರದಿಯಾಗಿದೆ.
ಇದನ್ನೂ ಓದಿ: World Cup Final; ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ವೀಕ್ಷಿಸಲು 13 ಜಿಲ್ಲೆಗಳಲ್ಲಿ ದೊಡ್ಡ ಪರದೆ ವ್ಯವಸ್ಥೆ…
ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನೂ ಓದಿ: IND vs AUS, CWC 2023 Final: ಫೈನಲ್ ಪಂದ್ಯಕ್ಕೆ ಕ್ಷಣಗಣನೆ; ಯಾರೆಲ್ಲಾ ಗಣ್ಯರು ಆಗಮಿಸಲಿದ್ದಾರೆ? ಇಲ್ಲಿದೆ ವಿವರ!
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಅಧಿಕಾರಿಗಳು ಇಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೂ ಮುನ್ನ ನಗೌರ್‌ನಿಂದ ಜುಂಜುನುಗೆ ಕರ್ತವ್ಯಕ್ಕಾಗಿ ಪ್ರಯಾಣಿಸುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ರಾಜ್ಯ ಅಧಿಕಾರಿಯೊಬ್ಬರು, ವಾಹನವು ವೇಗದಲ್ಲಿ ಚಲಿಸುತ್ತಿದ್ದಾಗ ಟ್ರಕ್ ಹಿಂದಿಕ್ಕಿ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ,(ಏಜೆನ್ಸೀಸ್).