ನ್ಯೂಸ್

ಕಾರು-ಟಿಪ್ಪರ್ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು, ಇನ್ನಿಬ್ಬರ ಪರಿಸ್ಥಿತಿ ಗಂಭೀರ..

ಹಾಸನ: ಕಾರು ಹಾಗೂ ಟಿಪ್ಪರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿದ್ದಾರೆ. ಮತ್ತೊಂದೆಡೆ ಗಂಭೀರ ಗಾಯಗೊಂಡಿರುವ ಇನ್ನಿಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಆಲೂರಿನ ಈಶ್ವರಹಳ್ಳಿ ಕೂಡಿಗೆ ಕಾರು-ಟಿಪ್ಪರ್ ಭೀಕರವಾದ ಅಪಘಾತಕ್ಕೆ ಒಳಗಾಗಿದೆ. ಕಾರು ಮಂಗಳೂರು ಕಡೆಗೆ ತೆರಳುತ್ತಿದ್ದು, ಟಿಪ್ಪರ್ ಹಾಸನ ಕಡೆಗೆ ಸಾಗುತ್ತಿತ್ತು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ.

ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರು ಹಾಗೂ ಗಾಯಾಳುಗಳ ಕುರಿತ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದು, ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

(ಇದು ತಕ್ಷಣದ ಮಾಹಿತಿ.. ಹೆಚ್ಚಿನ ವಿವರ ಅಪ್​ಡೇಟ್ ಆಗಲಿದೆ)