ನ್ಯೂಸ್

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಭೀಕರ ದೃಶ್ಯ ಕಂಡು ಬೆಚ್ಚಿಬಿದ್ದ ಜನ

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ರಂಗೇನಹಳ್ಳಿ ಸಮೀಪ ಶನಿವಾರ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ಭೀಕರ ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.

ಲಕ್ಕವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರಂಗೇನಹಳ್ಳಿ ಸಮೀಪ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಮೃತ ವ್ಯಕ್ತಿಯನ್ನು ಕುಂದಾಪುರ ಮೂಲದವ ಎನ್ನಲಾಗಿದೆ. ಇದನ್ನೂ ಓದಿರಿ ಬೆಳ್ಳಂಬೆಳಗ್ಗೆ ಮದುವೆ ಮನೆಯಲ್ಲಿ ವಧುವಿನ ಕೋಣೆಯತ್ತ ಗುಂಡಿನ ದಾಳಿ! ಬೆಚ್ಚಿಬಿದ್ದ ಕುಟುಂಬಸ್ಥರು

ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಮೂವರನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೀಡಾದ ಎರಡೂ ಕಾರುಗಳ ಮುಂಭಾಗ ನಜ್ಜುಗುಜ್ಜಾಗಿದೆ.