ನ್ಯೂಸ್

ಫೇಸ್‌ಬುಕ್‌ನಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು!

ಮಹಾರಾಷ್ಟ್ರ: ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ವರದಿಯಾಗಿದೆ.

ತ್ರಿವರ್ಣ ಧ್ವಜಕ್ಕೆ ಮಾಡಿದ ಅಪಮಾನಕ್ಕೆ ವ್ಯಕ್ತಿಯ ವಿರುದ್ಧ ಇದೀಗ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ಅಧಿಕಾರಿಯೊಬ್ಬರು ಮಂಗಳವಾರ (ಆಗಸ್ಟ್​ 28) ಮಾಹಿತಿ ನೀಡಿದ್ದಾರೆ. ಡೊಂಬಿವಲಿಯ ವ್ಯಕ್ತಿಯೊಬ್ಬರು ಪೊಲೀಸ್ ದೂರಿನಲ್ಲಿ, "ಕಳೆದ ವರ್ಷ ಉಲ್ಲಾಸನಗರ ಪ್ರದೇಶದ ವ್ಯಕ್ತಿ, ಫೇಸ್‌ಬುಕ್ ಪ್ರೊಫೈಲ್‌ನಲ್ಲಿ ರಾಷ್ಟ್ರಧ್ವಜದ ಕ್ರಾಪ್​ ಮಾಡಿದ ಚಿತ್ರವನ್ನು ತನ್ನ ಕಾಲಿನ ಮೇಲೆ ಇರಿಸಿರುವ ಫೋಟೋ ಪೋಸ್ಟ್ ಮಾಡಿದ್ದಾರೆ" ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದು ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನ ಎಂದು ದೂರುದಾರರು ದೂರಿನಲ್ಲಿ ಹೇಳಿದ್ದು, ದೂರಿನ ಆಧಾರದ ಮೇರೆಗೆ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ 1971ರ ಅಡಿಯಲ್ಲಿ ವ್ಯಕ್ತಿಯ ವಿರುದ್ಧ ಭಾನುವಾರ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ,(ಏಜೆನ್ಸೀಸ್).