ನವದೆಹಲಿ: ಜಾತಿಗಣತಿ ವರದಿಯಲ್ಲಿರುವ ಅಂಕಿ ಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ(CM) ಸಿದ್ದರಾಮಯ್ಯ ತಿಳಿಸಿದರು.
ನವದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದರು. RSS ಪ್ರಮುಖ ಮೋಹನ್ ಭಾಗವತ್ ಅವರು ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ RSS ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು. ಮೋಹನ್ ಭಾಗವತರ ಹೇಳಿಕೆ ಸರಿಯಾದುದಲ್ಲ ಎಂದರು.
ಇದನ್ನೂ ಓದಿ:6 ಆಪರೇಷನ್, 190 ಹೊಲಿಗೆ; ಶಿವರಾಜ್ಕುಮಾರ್ ಸರ್ಜರಿ ಕುರಿತು ಆಘಾತಕಾರಿ ಅಂಶ ಬಿಚ್ಚಿಟ್ಟ Madhu Bangarappa
ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಬದಲಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.
ಇದನ್ನೂ ಓದಿ:6 ಆಪರೇಷನ್, 190 ಹೊಲಿಗೆ; ಶಿವರಾಜ್ಕುಮಾರ್ ಸರ್ಜರಿ ಕುರಿತು ಆಘಾತಕಾರಿ ಅಂಶ ಬಿಚ್ಚಿಟ್ಟ Madhu Bangarappa
ಕಿಯೋನಿಕ್ಸ್ ಅಸೋಸಿಯೇಷನ್ ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.